ಆನೇಕಲ್​​ನಲ್ಲಿ ಡಿಸಿಎಂ ಜನತಾ ದರ್ಶನ ನಾಳೆ

dk shivakumar
Published on

ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ತಳ ಮಟ್ಟದಲ್ಲಿಯೇ ಪರಿಹರಿಸುವ ಉದ್ದೇಶದಿಂದ ಸೋಮವಾರ (ಸೆ.25) ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಉಪ ಮುಖ್ಯಮಂತಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.

ಜನತಾದರ್ಶನ ಕಾರ್ಯಕ್ರಮವು ಅಂದು ಮಧ್ಯಾಹ್ನ 3 ಗಂಟೆಗೆ ಆನೇಕಲ್ ತಾಲೂಕಿನ ಅತ್ತಿಬೆಲೆ ಹೋಬಳಿಯ ಕೆಎಚ್‌ಬಿ ಸೂರ್ಯನಗರದ ಮೊದಲನೇ ಹಂತದಲ್ಲಿರುವ ಸುರಾನ ಕಾಲೇಜು ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆನೇಕಲ್ ಶಾಸಕ ಬಿ.ಶಿವಣ್ಣ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ.ಕೆ ಸುರೇಶ್ ಹಾಗೂ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಆನೇಕಲ್ ತಾಲೂಕಿನ ರೈತರು, ಸಾಹಿತಿಗಳು, ಸ್ವತಂತ್ರ ಹೋರಾಟಗಾರರು, ಮಾಜಿ ಸೈನಿಕರು ಎಲ್ಲ ಸಮುದಾಯದ ಸಂಘಟನೆಗಳು, ಸಂಘ-ಸಂಸ್ಥೆಗಳು ತಾಲೂಕಿನ ಎಲ್ಲಾ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು, ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಜನತಾದರ್ಶನ ಕಾರ್ಯಕ್ರಮದಲ್ಲಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net