ಮೈಸೂರಿನಲ್ಲಿ ಸೆ.25 ರಂದು ಜನತಾ ದರ್ಶನ : ಸಚಿವ ಮಹದೇವಪ್ಪಗೆ ಅಹವಾಲು ಸಲ್ಲಿಸಿ

Mahadevappa
Published on

ಮೈಸೂರು: ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸೆ.25 ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಜನತಾ ದರ್ಶನ ಹಮ್ಮಿಕೊಂಡಿದ್ದಾರೆ.
ಸಾರ್ವಜನಿಕರು ತಮ್ಮ ಅಹವಾಲನ್ನು ಅಗತ್ಯ ದಾಖಲೆಗಳೊಂದಿಗೆ ಸೆ.21 ಮತ್ತು 22 ರಂದು ಬೆಳಗ್ಗೆ 11 ರಿಂದ ಸಂಜೆ 5ರವರೆಗೆ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ತೆರೆದಿರುವ ಜನತಾ ದರ್ಶನ ವಿಭಾಗ ಅಥವಾ ಸಿದ್ದಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು.
ಸ್ವೀಕೃತವಾದ ಮನವಿಗಳನ್ನು ಕ್ರೋಢೀಕರಿಸಿ ಆದ್ಯತೆ ಮೇರೆಗೆ ಸೆ.25 ರಂದು ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಅಲ್ಲದೆ, ಸೆ.25 ರಂದು ಸಹ ಅಹವಾಲು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net