

ರಾಮನಗರ: ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳ ಕುರಿತು ಮುಖ್ಯ ಮಂತ್ರಿಯನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ.
ಈ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಸೆ. 25ರಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಹಮಿಕೊಳ್ಳಲಾಗಿದೆ.
ನಗರದ ಜಿಲ್ಲೆಯ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೆ. 25 ರಂದು ಬೆಳಿಗ್ಗೆ 8.30 ಗಂಟೆಗೆ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ.
ಸಾರ್ವಜನಿಕರು/ನಾಗರಿಕರುಗಳು ಸರ್ಕಾರಿ ಕಚೇರಿಗಳಲ್ಲಿ ಎದುರಿಸುತ್ತಿರುವ ಹಲವಾರು ರೀತಿಯ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸ್ವೀಕರಸಲಾಗುವುದು. ಅದರಂತೆ ರಾಮನಗರ ಜಿಲ್ಲೆಯ ಸಾರ್ವಜನಿಕರು ಖುದ್ದು ಹಾಜರಾಗಿ ಅರ್ಜಿ/ಮನವಿಗಳನ್ನು ನೀಡಲು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.