ಜನರ ಸಮಸ್ಯೆ ಪರಿಹಾರಕ್ಕೆ ಜನತಾ ದರ್ಶನ ವೇದಿಕೆ: ಹೆಬ್ಬಾಳ್ಕರ್​

udp-25-janatha
Published on

ಉಡುಪಿ: ಜನತಾದರ್ಶನದಂತ ಕಾರ್ಯಕ್ರಮ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಉತ್ತಮ ವೇದಿಕೆಯಾಗಲಿದೆ. ಈ ಮೂಲಕ ಹಂತ ಹಂತವಾಗಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷಿ ಹೆಬ್ಬಾಳ್ಕರ್​ ಹೇಳಿದರು.

ಸೋಮವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ಅಟಲ್​ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ 'ಜನತಾ ದರ್ಶನ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಜನತಾ ದರ್ಶನ ಕಾರ್ಯ ನಡೆಯುತ್ತಿದ್ದು, ಸಾರ್ವಜನಿಕರು ಪದೇ ಪದೇ ಸಣ್ಣ ಪುಟ್ಟ ಕೆಲಸಗಳಿಗೂ ಸರ್ಕಾರಿ ಕಚೇರಿಗಳಿಗೆ, ಶಾಸಕರ, ಜಿಲ್ಲಾ ಮಂತ್ರಿಗಳ, ಮುಖ್ಯಮಂತ್ರಿಗಳ ಬಳಿಗೆ ಅಲೆಯುವುದನ್ನು ತಪ್ಪಿಸುವುದೇ ಇದರ ಮೂಲ ಉದ್ದೇಶ ಎಂದರು.

ಆರೋಗ್ಯ, ಕಂದಾಯ, ಅರಣ್ಯ ಇಲಾಖೆಗಳಲ್ಲಿ ಸಾಕಷ್ಟು ಅರ್ಜಿಗಳು ಬಾಕಿ ಉಳಿದಿವೆ. ಸಾಧ್ಯವಾದಷ್ಟು ಮಟ್ಟಿಗೆ ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಸೂಚಿಸಲಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್​ ವರಿಷ್ಠ್ಠಾಧಿಕಾರಿ ಡಾ.ಅರುಣ್​, ಜಿಲ್ಲಾ ಪಂಚಾಯತಿ ಸಿಇಒ ಡಾ.ಪ್ರಸನ್ನ,. ಎಚ್​, ಉಪವಿಭಾಗಧಿಕಾರಿ ರಶ್ಮಿ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net