ಜಂಗಮರಿಗೆ ಪ್ರತಿಭಾ ಪುರಸ್ಕಾರ

Published on

ಹುಬ್ಬಳ್ಳಿ: ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕದೊಂದಿಗೆ ಪಾಸಾದ ಜಂಗಮ ವಿದ್ಯಾರ್ಥಿಗಳಿಗೆ ಜಂಗಮ ಅಭಿವೃದ್ಧಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಹುಬ್ಬಳ್ಳಿ ಶಹರ ಹಾಗೂ ತಾಲೂಕಿನ ವಿದ್ಯಾರ್ಥಿಗಳು ಅಂಕಪಟ್ಟಿ ಝರಾಕ್ಸ್, ಎರಡು ಭಾವಚಿತ್ರ, ವಿಳಾಸ, ದೂರವಾಣಿ ಸಂಖ್ಯೆ ಮುಂತಾದ ವಿವರದೊಂದಿಗೆ ಜೂನ್ 30ರೊಳಗೆ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಜಂಗಮಾಭಿವೃದ್ಧಿ ಸಂ, 3ನೇ ಮಹಡಿ, ಭವಾನಿ ಆರ್ಕೆಡ್, ಬಸವವನ ಎದುರು, ಹುಬ್ಬಳ್ಳಿ.
ಹೆಚ್ಚಿನ ಮಾಹಿತಿಗಾಗಿ ಸಂಘದ ಅಧ್ಯಕ್ಷ ಜಗದೀಶ ಕೂಡಲಮಠ ಅವರನ್ನು ಸಂಪರ್ಕಿಸಬಹುದು ಎಂದು ಕಾರ್ಯದರ್ಶಿ ಮಹಾಂತೇಶ ಗಿರಿಮಠ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net