ಯಾದಗಿರಿ : ಸೆ.1 ರಿಂದ 21ನೇ ಜಾನುವಾರು ಗಣತಿ ಆರಂಭ

ಸೆ.1 ರಿಂದ 21ನೇ ಜಾನುವಾರು ಗಣತಿ ಆರಂಭ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
  Yadagiri ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ರಾಷ್ಟಿçÃಯ ಜಾನುವಾರು ಗಣತಿಯ ಮಾಹಿತಿಯ ಕರಪತ್ರ ಮತ್ತು ಜಾನುವಾರು ಗಣತಿಯ ಸೂಚನಾ ಕೈಪಿಡಿ ಬಿಡುಗಡೆ ಮಾಡಿದರು.
Published on


ಮಾಹಿತಿಯ ಕರಪತ್ರ ಮತ್ತು ಜಾನುವಾರು ಗಣತಿಯ ಸೂಚನಾ ಕೈಪಿಡಿ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಡಾ.ಸುಶೀಲ

ಯಾದಗಿರಿ : ಆಗಸ್ಟ್ 29, (ಕ.ವಾ) : ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಸೆಪ್ಟೆಂಬರ್ 1ರಿಂದ ಡಿಸೆಂಬರ್ 31ರವರೆಗೆ 21ನೇ ರಾಷ್ಟಿçÃಯ ಜಾನುವಾರು ಗಣತಿ ಕಾರ್ಯ ನಡೆಯಲಿದೆ’ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ತಿಳಿಸಿದರು.

     ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ರಾಷ್ಟಿçÃಯ ಜಾನುವಾರು ಗಣತಿಯ ಮಾಹಿತಿಯ ಕರಪತ್ರ ಮತ್ತು ಜಾನುವಾರು ಗಣತಿಯ ಸೂಚನಾ ಕೈಪಿಡಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

     ಗಣತಿದಾರರು ನಗರ ಮತ್ತು ಗ್ರಾಮೀಣ ಭಾಗದ ಪ್ರತಿಯೊಂದು ಮನೆ, ಉದ್ಯಮ, ಸಂಸ್ಥೆಗಳಿಗೆ ಭೇಟಿ ನೀಡಿ ಎಲ್ಲಾ ತರಹದ ಸಾಕು ಪ್ರಾಣಿಗಳು ಹಾಗೂ ಕುಕ್ಕುಟಗಳ ಮಾಹಿತಿ ಸಂಗ್ರಹಿಸುವರು. ಇದಕ್ಕೆ ಸಾರ್ವಜನಿಕರು, ರೈತರು ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಕೋರಿದರು.

  ಜಾನುವಾರು ಸಾಕಾಣಿಕೆದಾರರು ಸಾಕಲಾಗುವ ಪಕ್ಷಿ ಮತ್ತು ಪ್ರಾಣಿಗಳ ಮಾಹಿತಿಯನ್ನು ಪಡೆಯಲಾಗುತ್ತದೆ. ಸಾರ್ವಜನಿಕವಾಗಿ ಬಿಟ್ಟಿರುವ ಬಿಡಾಡಿ ದನ, ನಾಯಿಗಳ ಮಾಹಿತಿಯನ್ನೂ ಸೇರಿಸಲಾಗುತ್ತದೆ. ದೇವಸ್ಥಾನದಲ್ಲಿ ಪ್ರಾಣಿಗಳನ್ನು ಸಾಕುವುದಿದ್ದರೆ ಗೋಸಾಲೆಗಳಿದ್ದರೆ ಮಾಹಿತಿ ಪಡೆಯಲಾಗುತ್ತದೆ. 10 ಕ್ಕಿಂತ ಜಾಸ್ತಿ ದನಗಳಿದ್ದರೆ, 1000ಕ್ಕಿಂತ ಜಾಸ್ತಿ ಕೋಳಿ ಸಾಕಿದರೆ, 50ರ ಮೇಲ್ಪಟ್ಟು ಆಡು ಸಾಕಾಣಿಕೆ ಇದ್ದರೆ, ಅವುಗಳನ್ನು ಫಾರಂ ಎಂದು ಪರಿಗಣಿಸಿ ಮಾಹಿತಿ ನಮೂದಿಸುತ್ತಾರೆ ಎಂದು ತಿಳಿಸಿದರು.

     ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ರಾಜು ದೇಶಮುಖ, ಡಿಡಿಪಿಯು ಚನ್ನಬಸಪ್ಪ ಕುಳಗೇರಿ, ಸಮಾಜ ಕಲ್ಯಾಣ ಇಲಖೆ ಅಧಿಕಾರಿ ಕುಮಾರಿ ಸರೋಜ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರವೀಣಕುಮಾರ, ತಹಶೀಲ್ದಾರ ಸುರೇಶ ಅಂಕಲಗಿ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುಲೈಮಾನ್ ನದಾಫ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net