

ಮಂಡ್ಯ: ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಕಲಾನಿಕೇತನ ಹಾಗೂ ಜಪಾನ್ ಕನ್ನಡ ಸಂಘದ ಸಂಯುಕ್ತಾಶ್ರಯದಲ್ಲಿ ಅ.8 ಮತ್ತು 9ರಂದು ಆಯೋಜಿಸಿರುವ ಕುವೆಂಪು ಕಲಾಉತ್ಸವ ಹಾಗೂ 24 ನೇ ವಿಶ್ವ ಕನ್ನಡ ಸಮ್ಮೇಳನದ ಅಧ್ಯಕ್ಷರಾಗಿ ಅಂತಾರಾಷ್ಟ್ರೀಯ ಸುಗಮ ಸಂಗೀತ ಗಾಯಕ ಡಾ.ಕಿಕ್ಕೇರಿ ಕೃಷ್ಣಮೂರ್ತಿ ಆಯ್ಕೆಯಾಗಿದ್ದಾರೆ.
ಜಪಾನ್‌ನ ಒಸಾಕಾದ ಆರ್ಟ್ ಹೋಟೆಲ್ ಒಸಾಕಾಬೈ ಟವರ್ ಸಭಾಂಗಣದಲ್ಲಿ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. 8ರಂದು ಸಂಜೆ 4ಗಂಟೆಗೆ ಸಮ್ಮೇಳನವನ್ನು ಪತ್ರಕರ್ತ ಜೆ.ಎಚ್.ಅನಿಲ್ ಕುಮಾರ್ ಉದ್ಘಾಟಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಜಿ ಸಹಾಯಕ ನಿರ್ದೇಶಕ ಅಣ್ಣೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪರಿಸರ ಸಂರಕ್ಷಣ ವೇದಿಕೆ ಅಧ್ಯಕ್ಷ ಕೋಟಪ್ಪ, ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ನಿವೃತ್ತ ಅಧಿಕಾರಿ ರಾಮಯ್ಯ, ಸಮಾಜ ಸೇವಕ ದಾದಾಪೀರ್ ಸೇರಿದಂತೆ ಹಲವರು ಭಾಗವಹಿಸಲಿದಗ್ದಾರೆ. ಸಮ್ಮೇಳನದಲ್ಲಿ ರಾಷ್ಟ್ರಕವಿ ಕುವೆಂಪು ಕುರಿತ ವಿಚಾರ ಸಂಕಿರಣ, ಗೀತಗಾಯನ, ನೃತ್ಯ, ವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಕಲಾನಿಕೇತನದ ಅಧ್ಯಕ್ಷ ಕುವೆಂಪು ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.