ಜಪ್ಪಿನಮೊಗರು ಗಾಂಜಾ ಸೇವನೆ ಆರೋಪಿ ಬಂಧನ

drugs
Published on


ಮಂಗಳೂರು: ನಗರದ ಜಪ್ಪಿನಮೊಗರು ದ್ವಾರದ ಬಳಿ ಗಾಂಜಾ ಸೇವನೆ ಆರೋಪದ ಮೇಲೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಚೇತನ್ ಕುಮಾರ್ (24) ಪ್ರಕರಣದ ಆರೋಪಿ.


ೆ.4ರಂದು ನಗರದ ಜಪ್ಪಿನ ಮೊಗರುವಿನಲ್ಲಿರುವ ದ್ವಾರದ ಬಳಿ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದ ಮೇಲೆ ಚೇತನ್ ಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಯ ವಿರುದ್ದ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net