

ಬೆಳಗಾವಿ : ಅಥಣಿಯಲ್ಲಿ ನಡೆದ ಪಶು ವೈದ್ಯಕೀಯ ಮಹಾವಿದ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ‘ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಹೇಳಿದರು. ಅಥಣಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯೊಂದೇ ಶಾಸಕ ಲಕ್ಷ್ಮಣ ಸವದಿ ಅವರ ಬೇಡಿಕೆಯಾಗಿದೆ’ ಎಂದು ಹೇಳಿದರು.
ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಮೂರು ಗ್ಯಾರಂಟಿ ಅನುಷ್ಠಾನಗೊಳಿಸಲಾಗಿದ್ದು, ಇದೇ ತಿಂಗಳಿನಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿಗೆ ತರಲಾಗುವುದು. ಬೆಳಗಾವಿಯಲ್ಲಿ 11 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರಕಲಿದೆ ಎಂದು ಹೇಳಿದರು.