

ಕಾನಹೊಸಹಳ್ಳಿ: ಸಮೀಪದ ಜರ್ಮಲಿ ಗ್ರಾಮದ ಜಮೀನಿನಲ್ಲಿ ಸಿಡಿಮದ್ದು ಸಿಡಿದು ರೈತ ಮಹಿಳೆ ಮತ್ತು ಇಬ್ಬರು ಬಾಲಕಿಯರು ಗಾಯಗೊಂಡ ಘಟನೆ ಹಿನ್ನೆಲೆಯಲ್ಲಿ ಜಮೀನಿಗೆ ಎಸ್ಪಿ ಶ್ರೀ ಹರಿಬಾಬು ಭೇಟಿ ನೀಡಿ ಪರಿಶೀಲಿಸಿದರು.
ನಂತರ ಮಾತನಾಡಿ, ಈ ಪ್ರಕರಣವನ್ನು ಗಭೀರವಾಗಿ ಪರಿಗಣಿಸಿದ್ದು, ಕಾನೂನು ಬಾಹಿರ ಕೃತ್ಯವಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತಪ್ಪಿತಸ್ಥರ ಪತ್ತೆಗೆ ತಂಡ ರಚಿಸಲಾಗಿದೆ ಎಂದರು.