ಭವನ್ ವಿದ್ಯಾ ಸಂಸ್ಥೆಯಲ್ಲಿ ರಾಜ್ಯೋತ್ಸವ

3kgl-1, (1)
Published on

ಕೊಳ್ಳೇಗಾಲ: ಪಟ್ಟಣದ ಭವನ್ ವಿದ್ಯಾ ಸಂಸ್ಥೆಯಲ್ಲಿ ಬುಧವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಉಸಿರಾಗಲಿ ಕನ್ನಡ 50ರ ಸಂಭ್ರಮ ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗರಾಜು, ಮಕ್ಕಳು ಕನ್ನಡದ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಕನ್ನಡದ ಇತಿಹಾಸವನ್ನು ತಿಳಿಯಬೇಕು. ನಮ್ಮ ನಾಡಿನ ಸಂಸ್ಕೃತಿಯನ್ನು ಅನುಸರಿಸಬೇಕು ಎಂದು ಹೇಳಿದರು.
ಭವನ್ಸ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಗಿರಿರಾಜು, ಮಹದೇಶ್ವರ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಡಾ.ಮಹದೇವಪ್ರಭು, ಚೆನ್ನಮಾದೇಗೌಡ, ನಾಗರಾಜು, ಶಿವಸ್ವಾಮಿ, ಬಿ.ಎ.ರಾಜಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net