ಕನ್ಯಾಣದಲ್ಲಿ ಮಲ್ಲಿಗೆ ಕೃಷಿ ಮಾಹಿತಿ ಶಿಬಿರ

mallige krishi
ಮಲ್ಲಿಗೆ ಕೃಷಿ ಮಾಹಿತಿ ಕಾರ್ಯಾಗಾರವನ್ನು ಹರೀಶ್ ಉದ್ಘಾಟಿಸಿದರು.
Published on

ಕೋಟ: ಜಲಾನಯನ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಕೃಷಿ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆ, ಬ್ರಹ್ಮಾವರ ಭಾ.ಕೃ.ಅ.ಪ. ಕೃಷಿ ವಿಜ್ಞಾನ ಕೇಂದ್ರ, ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ಮತ್ತು ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ಸಹಯೋಗದಲ್ಲಿ ಮಲ್ಲಿಗೆ ಕೃಷಿ ಮಾಹಿತಿ ಕಾರ್ಯಾಗಾರ ಕೋಡಿ ಕನ್ಯಾಣದಲ್ಲಿ ಮಂಗಳವಾರ ಆಯೋಜಿಸಲಾಯಿತು.

ಜಿಲ್ಲಾ ಲೀಡ್ ಬ್ಯಾಂಕ್ ಪ್ರಬಂಧಕ ಹರೀಶ್ ಕಾರ್ಯಾಗಾರ ಉದ್ಘಾಟಿಸಿ ಕೃಷಿ ಚಟುವಟಿಕೆಗಳಿಗೆ ಬ್ಯಾಂಕಿನಿಂದ ದೊರೆಯುವ ಸವಲತ್ತುಗಳ ಮಾಹಿತಿ ನೀಡಿದರು. ಬ್ರಹ್ಮಾವರ ಕೆ.ವಿ.ಕೆ ತೋಟಗಾರಿಕಾ ವಿಭಾಗದ ವಿಜ್ಞಾನಿ ಡಾ.ಭೂಮಿಕಾ ಮಲ್ಲಿಗೆ ಕೃಷಿ ಮತ್ತು ಮೌಲ್ಯವರ್ಧನೆಯಿಂದ ಮಹಿಳೆಯರ ಆರ್ಥಿಕ ಪ್ರಗತಿ ಕುರಿತು ವಿವರಿಸಿದರು. ರೈತರಿಗೆ ಗಿಡಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.

ಉಡುಪಿ ಕಿನಾರಾ ಮೀನುಗಾರ ಉತ್ಪಾದಕರ ಕಂಪನಿ ನಿರ್ದೇಶಕ ಸುದಿನ ಕೋಡಿ, ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ಅಧ್ಯಕ್ಷೆ ಬೇಬಿ ಮೆಂಡನ್, ಪ್ರಮುಖರಾದ ಅರ್ಪಿತಾ ಬ್ರಹ್ಮಾವರ, ಪೂರ್ಣಿಮಾ, ಜಯಶ್ರೀ ಪೂಜಾರಿ ಉಪಸ್ಥಿತರಿದ್ದರು. ವಿಜ್ಞಾನಿ ಡಾ.ಸದಾನಂದ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net