ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜಾಥ

17mdk07
Published on

ಮಡಿಕೇರಿ:

ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಯೋಗ ಜಾಥವೂ ನಗರದ ಪ್ರಮುಖ ರಸ್ತೆಯಲ್ಲಿ ಶನಿವಾರ ನಡೆಯಿತು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಗರದ ಗಾಂಧಿ ಮೈದಾನದಲ್ಲಿ ಜಾಥಾಗೆ ಚಾಲನೆ ನೀಡಿ ಮಾತನಾಡಿ ಪ್ರತಿಯೊಬ್ಬರ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದೆ ಎಂದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಯೋಗ ಸಂಘಟನ್ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೩ ರ ೯ನೇ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದ ಗಾಂಧಿ ಮೈದಾನದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದವರೆಗೆ ಜಾಥಾ ನಡೆಯಿತು.

ಜೂನ್ ೨೧ ರಂದು ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಶಾಲಾ ಮಕ್ಕಳು, ಎಲ್ಲಾ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಳ್ಳುವಂತೆ ಡಾ.ಬಿ.ಸಿ.ಸತೀಶ ಅವರು ಹೇಳಿದರು.

ಈ ಬಾರಿಯ ಘೋಷವಾಕ್ಯ ವಸುದೈವ ಕುಟುಂಬಕ್ಕಾಗಿ ಯೋಗ ಆಗಿರುವುದರಿಂದ ಪ್ರತಿಯೊಬ್ಬರೂ ಮನೆಯಲ್ಲಿಯೇ ಯೋಗದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದರು.

ಜಾಥಾದಲ್ಲಿ ನಗರಸಭೆ ಅಧ್ಯಕರಾದ ಅನಿತಾ ಪೂವಯ್ಯ ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಪೌರಾಯುಕ್ತರಾದ ವಿಜಯ, ವೈದ್ಯಾಧಿಕಾರಿ ಡಾ.ರಾಜಾರಾಂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net