ಸಂವಿಧಾನವನ್ನು ಪ್ರತಿಯೊಬ್ಬರೂ ಗೌರವಿಸಬೇಕು

30blrp5
Published on

ಬೇಲೂರು: ಸಂವಿಧಾನವನ್ನು ಪ್ರತಿಯೊಬ್ಬ ಭಾರತೀಯರೂ ಗೌರವಿಸಬೇಕು ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿರುವ ಸಂವಿಧಾನ ಜಾಗೃತಿ ಜಾಥಾ ಮಂಗಳವಾರ ಬೇಲೂರು ಪಟ್ಟಣಕ್ಕೆ ಆಗಮಿಸಿದ ಸಂದರ್ಭ ಸ್ವಾಗತ ಕೋರಿ ಅವರು ಮಾತನಾಡಿದರು.
ಇಂದು ದೇಶ ಸುಭಿಕ್ಷವಾಗಿದೆ, ನಾವೆಲ್ಲರೂ ನೆಮ್ಮದಿಯಿಂದ ಇದ್ದೇವೆ. ಮಹಿಳೆಯರಿಗೆ ಸ್ಥಾನ, ಅವಕಾಶ, ಗೌರವಗಳು ದೊರೆತಿವೆ ಎಂದರೆ ಅದಕ್ಕೆ ಸಂವಿಧಾನ ಕಾರಣವಾಗಿದೆ ಎಂದರು. ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ಮಾತನಾಡಿ, ದೇಶದ ಜನತೆಗೆ ಸಮಾನ ಅವಕಾಶ, ಹಕ್ಕುಗಳನ್ನು ಸಂವಿಧಾನ ನೀಡಿದೆ. ಈ ಬಗ್ಗೆ ಯಾರೂ ತಪ್ಪಾಗಿ ಭಾವಿಸಬಾರದು. ನಾವು ಸಂವಿಧಾನದ ಆಶಯದಂತೆ ನಡೆಯಬೇಕು ಎಂದರು.
ಉಪನ್ಯಾಸಕರಾದ ಮಂಜುನಾಥ್, ಪೂರ್ಣಚಂದ್ರ ಮಾತನಾಡಿದರು. ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪುರಸಭೆ ಆವರಣ ತಲುಪಿತು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಮೇಶ್, ತಾಪಂ ಇಒ ಸತೀಶ್, ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಂಗಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾರಾಯಣ್, ವಿದ್ಯಾರ್ಥಿಗಳು, ವಿವಿಧ ಇಲಾಖೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net