

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪುತ್ತೂರು ಹಾಗೂ ಉಪವಿಭಾಗದ ಪೊಲೀಸ್ ಠಾಣೆಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಽ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಜಾಗೃತಿ ಮತ್ತು ಅರಿವು ಕಾರ್ಯಕ್ರಮ ದರ್ಬೆ ಮುಖ್ಯ ರಸ್ತೆಯಲ್ಲಿ ಜಾಗೃತಿ ಕಾಲ್ನಡಿಗೆ ಜಾಥಾ ಗುರುವಾರ ನಡೆಯಿತು.
ಪುತ್ತೂರು ಉಪವಿಭಾಗ ಉಪಾಧೀಕ್ಷಕ ಅರುಣ್ ನಾಗೇಗೌಡ ಮಾತನಾಡಿ, ಮಕ್ಕಳಿಗೆ ಮಾದಕ ದ್ರವ್ಯ ಸೇವನೆ ಪಿಡುಗು ಮತ್ತು ಅದರ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯತೆ ಇದೆ ಎಂದು ಹೇಳಿದರು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಿಂದ ದರ್ಬೆ ವೃತ್ತದವರೆಗೆ ನಡೆದ ಜಾಥಾಕ್ಕೆ ಪ್ರಾಂಶುಪಾಲ ಅಶೋಕ್ ರಾಯನ್ ಕ್ರಾಸ್ತಾ ಚಾಲನೆ ನೀಡಿದರು.
ಪುತ್ತೂರು ನಗರ ಠಾಣೆ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜ, ಸಂಚಾರಿ ಪೊಲೀಸ್ ಉಪನಿರೀಕ್ಷಕ ಉದಯ ರವಿ, ಸಂಪ್ಯ ಪೊಲೀಸ್ ಉಪನಿರೀಕ್ಷಕ ಜಂಬೂರಾಜ್, ಪತ್ರಾವೋ ಆಸ್ಪತ್ರೆಯ ಸಿಬ್ಬಂದಿ ಜಾನ್ಸನ್, ನಗರ ಪೊಲೀಸ್ ಠಾಣಾ ಉಪನಿರೀಕ್ಷಕ ಆಂಜನೇಯ ರೆಡ್ಡಿ ಉಪಸ್ಥಿತರಿದ್ದರು.
ಯುವಜನತೆ ಮಾದಕ ದ್ರವ್ಯಗಳ ದಾಸರಾಗಿ ಮಕ್ಕಳಲ್ಲಿ ತೊಂದರೆಗಳು ಉಂಟಾಗುತ್ತಿವೆ. ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಯುವಜನಾಂಗ ಬಲಿಯಾಗುತ್ತಿದೆ.
| ಡಾ.ಪ್ರಶಾಂತ್ ವೈದ್ಯರ್ ಆಯುರ್ವೆದ ಆಸ್ಪತ್ರೆ ವೈದ್ಯ