ಗುಂಡ್ಲುಪೇಟೆಯಲ್ಲಿ ವಿದ್ಯಾರ್ಥಿಗಳಿಂದ ಜಾಥಾ

15-GPT-2
ಗುಂಡ್ಲುಪೇಟೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು.
Published on

ಗುಂಡ್ಲುಪೇಟೆ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದ ವಿದ್ಯಾರ್ಥಿಗಳು ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ವಾಚಿಸಿದರು.

ಶುಕ್ರವಾರ ಬೆಳಗ್ಗೆ ವಿವಿಧ ಶಾಲೆ, ಕಾಲೇಜುಗಳ ಸುಮಾರು 2 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪ್ರಮುಖ ಬೀದಿಗಳಲ್ಲಿ ಜಾಥಾ ಮೂಲಕ ದೇವರಾಜ ಅರಸು ಕ್ರೀಡಾಂಗಣದಲ್ಲಿ ಸಮಾವೇಶಗೊಂಡರು. ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ರಮೇಶ್ ಬಾಬು ಸಂವಿಧಾನ ಪೀಠಿಕೆ ಬೋಧಿಸಿದರು.

ತಾಪಂ ಇಒ ರಾಮಲಿಂಗಯ್ಯ, ಬಿಇಒ ರಾಜಶೇಖರ್, ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಂಜುಂಡೇಗೌಡ, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಎಂ.ಪಿ.ಮಂಜಣ್ಣ, ನಾನಾ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಮುಖಂಡರು, ಕನ್ನಡಪರ ಸಂಘಟನೆಗಳು, ಸರ್ಕಾರೇತರ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net