ಬಿ.ಸಿ.ರೋಡಿನಲ್ಲಿ ಜಾಥಾ ಕಾರ್ಯಕ್ರಮ

jatha
ಬಂಟ್ವಾಳದ ತೌಹಿದ್ ಶಾಲೆಯಲ್ಲಿ ಜಾಥಕ್ಕೆ ಚಾಲನೆ ನೀಡಲಾಯಿತು.
Published on

ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗ ಅಭಿಯಾನ ಕಾರ್ಯಕ್ರಮ ಅಂಗವಾಗಿ ತಾಲೂಕು ಆಡಳಿತದ ವತಿಯಿಂದ ಜಾಥಾ ಕಾರ್ಯಕ್ರಮ ಬಿ.ಸಿ.ರೋಡಿನಲ್ಲಿ ನಡೆಯಿತು. ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಬಿ.ಸಿ.ರೋಡಿನ ಕೆಳಗಿನ ಪೇಟೆಯಿಂದ ಜಕ್ರಿಬೆಟ್ಟುವರೆಗೆ ಜಾಥಾ ಕಾರ್ಯಕ್ರಮ ನಡೆದಿದ್ದು, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಆರೋಗ್ಯ ನಿರೀಕ್ಷಕ ರತ್ನ ಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ., ಕಂದಾಯ ನಿರೀಕ್ಷಕ ಜನಾರ್ದನ ಸಹಿತ ವಿದ್ಯಾರ್ಥಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಜಾಥಾದಲ್ಲಿ ಪಾಲ್ಗೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net