

ಮಡಿಕೇರಿ:
ಇದೇ ತಿಂಗಳು 17ಕ್ಕೆ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ನಡೆಯಲಿರುವ ಪವಿತ್ರ ತೀಥೋದ್ಭವ ಮತ್ತು ನಂತರದ ಒಂದು ತಿಂಗಳ ಕಾಲದ ಜಾತ್ರೆ ಹಿನ್ನೆಲೆಯಲ್ಲಿ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಭರದ ಸಿದ್ಧತೆ ನಡೆದಿದೆ. ಈ ಬಾರಿ ಅ.17ರಂದು ಶುಕ್ರವಾರ ಮಧ್ಯಾಹ್ನ 01.44ಕ್ಕೆ ಸಲ್ಲುವ ಮಕರ ಲಗ್ನದಲ್ಲಿ ತೀರ್ಥೋದ್ಭವ ಸಂಭವಿಸಲಿದ್ದು, ತೀರ್ಥರೂಪಿಣಿಯಾಗಿ ಕಾವೇರಿ ಈ ಸಂದರ್ಭದಲ್ಲಿ ಭಕ್ತರಿಗೆ ದರ್ಶನ ನೀಡುತ್ತಾಳೆ ಎನ್ನುವ ನಂಬಿಕೆ ಇರುವುದರಿಂದ ಈ ವರ್ಷ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿರುವುದರಿಂದ ಜಿಲ್ಲಾಡಳಿತದ ವತಿಯಿಂದ ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
ಜಾತ್ರಾ ಮಹೋತ್ಸದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಮತ್ತು ಇತರೆ ನಿರ್ವಹಣೆಗಾಗಿ ಕಾವೇರಿ ನೀರಾವರಿ ನಿಗಮ ನಿಯಮಿತ ವತಿಯಿಂದ 2 ಕೋಟಿ ರೂ. ಮತ್ತು ಜಾತ್ರೆಗೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರದ ವತಿಯಿಂದ ಮುಜರಾಯಿ ಇಲಾಖೆ ಮೂಲಕ 75 ಲಕ್ಷ ರೂ. ಅನುದಾನ ಮಂಜೂರಾಗಿದೆ.
ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ, ಬ್ಯಾರಿಕೇಡ್ ಅಳವಡಿಕೆ, ವೇದಿಕೆ ನಿರ್ಮಾಣ, ಮಳೆಯಿಂದ ರಕ್ಷಣೆಗಾಗಿ ಮೆಟಲ್ ಶೀಟ್, ಪೆಂಡಾಲ್‌ಗಳು, ಹೂವಿನ ಅಲಂಕಾರ, ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದAತೆ ಎಲ್.ಇ.ಡಿ ಪರದೆಗಳು, ಫೋಟೋಗ್ರಾಫಿ ಮತ್ತು ಭಕ್ತಾದಿಗಳ ಭದ್ರತೆಯ ದೃಷ್ಟಿಯಿಂದ ಅವಶ್ಯವಿರುವ ಕಡೆಗಳಲ್ಲಿ ಸಿ.ಸಿ ಕ್ಯಾಮರಾ ಅಳವಡಿಕೆಗಳಿಗೆ ಸಂಬAಧಿಸಿದAತೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಸೂಕ್ತ ಗುತ್ತಿಗೆದಾರರನ್ನು ಗುರುತಿಸಿ ಕಾರ್ಯಾದೇಶ ನೀಡಲಾಗಿದೆ.
ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಅತೀ ಹೆಚ್ಚು ಮಳೆಯಿಂದಾಗಿ ದೇವಾಲಯಗಳ ಗೋಪುರ, ನೆಲಹಾಸು, ಅಲಂಕಾರಿಕ ಕಲ್ಲುಗಳ ಶುಚಿತ್ವ, ಸುಣ್ಣ - ಬಣ್ಣಗಳು ಮತ್ತು ಕಾವೇರಿ ನೀರಾವರಿ ನಿಗಮದ ವತಿಯಿಂದ ತ್ರಿವೇಣಿ ಸಂಗ್ರಮ ಸ್ನಾನಘಟ್ಟದಲ್ಲಿ ಹೂಳೆತ್ತುವುದು ಹಾಗೂ ದೇವಾಲಯದ ಆವರಣಗಳು ಮತ್ತು ಭಾಗಮಂಡಲಕ್ಕೆ ಸಂಪರ್ಕಿಸುವ ರಸ್ತೆಗಳ ಇಕ್ಕೆಲಗಳಲ್ಲಿ ಕಾಡು ಕಡಿದು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಕೆಲಸ ನಡೆಯುತ್ತಿದೆ.
ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ-2025ಕ್ಕೆ ಸಂಬAಧಿಸಿದAತೆ ಸೆ.15ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಎನ್.ಎಸ್. ಬೋಸರಾಜು ಮತ್ತು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಸೂಚನೆಯಂತೆ ಎಲ್ಲಾ ಅಗತ್ಯ ಸೌಕರ್ಯಗಳನ್ನು ಜಾತ್ರಾ ಸಂದರ್ಭದಲ್ಲಿ ಒದಗಿಸಲು ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾಹಿತಿ ನೀಡಿದ್ದಾರೆ.
ಈ ವರ್ಷ ಮಧ್ಹಾಹ್ನದ ವೇಳೆಗೆ ತೀರ್ಥೋದ್ಭವ ಸಂಭವಿಸುವುದರಿAದ ತ್ರಿವೇಣಿ ಸಂಗಮ ಕ್ಷೇತ್ರ ಭಾಗಮಂಡಲ ಮತ್ತು ಶ್ರೀ ಕ್ಷೇತ್ರ ತಲಕಾವೇರಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು, ಭಕ್ತರಿಗೆ ಅನಾನುಕೂಲ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ವಿಜಯವಾಣಿಯಲ್ಲಿ ಮಂಗಳವಾರ (ಅ.9) ಪ್ರಕಟವಾದ ಲೌಡ್‌ಸ್ಪೀಕರ್‌ನಲ್ಲಿ ಪತ್ರಿಕೆಯ ಓದುಗರು ಅಭಿಪ್ರಾಯ ಹಂಚಿಕೊAಡಿದ್ದರು. ಇದಕ್ಕೆ ಪೂರಕವಾಗಿ ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಭಕ್ತರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.