ಜಾತಿ ಗಣತಿ ಅಲ್ಲ : ಸಾಮಾಜಿಕ ಆರ್ಥಿಕ ಸಮೀಕ್ಷೆ‌ಯಿಂದ ಯಾರಿಗೂ ಅನ್ಯಾಯ ಆಗಲ್ಲ ಬಿಡಲ್ಲ ಎಂದ‌ ಸಿಎಂ

MUDA case
Published on

ವಿಜಯವಾಣಿ ಸುದ್ದಿಜಾಲ ಕಲಬುರಗಿ

ಇಷ್ಟಕ್ಕೂ ಅದು ಜಾತಿ ಗಣತಿ ಅಲ್ಲ, ಜಾತಿಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಾಗಿದೆ. ಈ ವರದಿಯಿಂದ ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು.

ನಗರದ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜತೆಗೆ ಮಾತನಾಡಿ,‌ ವರದಿ ಕುರಿತು ನಾಳೆ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಸೂಕ್ತ ನಿರ್ದಾರ ಕೈಗೊಳ್ಳಲಾಗುವುದು ಎಂದರು.

ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದರು.

ಒಕ್ಕಲಿಗ ಮತ್ತು ಲಿಂಗಾಯತರು ವಿರೋಧಿಸುತ್ತಿರುವುದು ಗಮನದಲ್ಲಿದೆ. ಆ ಸಮುದಾಯದ ಸಚಿವರು ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿರಬಹುದು. ಎಲ್ಲವನ್ನು ಚರ್ಚೆ ಮಾಡುತ್ತೇವೆ ಎಂದು ಸಿಎಂ ತಿಳಿಸಿದರು.

ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ತಿಳಿಸಿದರು.

*ದಾವಣಗೆರೆ ಮಹಿಳೆಗೆ ಥಳಿತ ಪ್ರಕರಣ: ಕಾನೂನು ಉಲ್ಲಂಘಿಸಿದರೆ ಬಲಿ ಹಾಕುತ್ತೇವೆ*

ದಾವಣಗೆರೆಯಲ್ಲಿ ಅನೈತಿಕ ಸಂಬಂಧ ಆರೋಪಿಸಿ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಯಾರೇ ತಪ್ಪು ಮಾಡಿದರೂ ಕೂಡ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ, ಬಲಿ ಹಾಕುತ್ತೇವೆ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net