

ಯಲ್ಲಾಪುರ: ತಾಲೂಕಿನ ಪುರಾಣ ಪ್ರಸಿದ್ಧ ಕವಡಿಕೆರೆ ದುರ್ಗಾದೇವಿ ದೇವಸ್ಥಾನದಲ್ಲಿ ಗಂಗಾಷ್ಟಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ.
ಪ್ರತಿನಿತ್ಯ ದುರ್ಗಾದೇವಿಗೆ ವಿಶೇಷ ಅಲಂಕಾರ ಮಾಡಲಾಗುತ್ತಿದೆ. ತಾಲೂಕಿನ ವಿವಿಧೆಡೆಯಿಂದ ಭಕ್ತರು ಆಗಮಿಸಿ, ದೇವಿಯ ದರ್ಶನ ಪಡೆದು ಹಣ್ಣುಕಾಯಿ, ಉಡಿ, ಕುಂಕುಮಾರ್ಚನೆ ಮುಂತಾದ ಸೇವೆ ಸಲ್ಲಿಸುತ್ತಿದ್ದಾರೆ.
ಗಂಗಾಷ್ಟಮಿ ಉತ್ಸವದ ಅಂಗವಾಗಿ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ, ಹಿರಿಯರಿಗೆ ಸನ್ಮಾನ ಹಾಗೂ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಸೇರಿ ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ. ಎರಡು ದಿನಗಳಿಂದ ನಡೆಯುತ್ತಿರುವ ಉತ್ಸವ ಗುರುವಾರ ಸಂಪನ್ನಗೊಳ್ಳಲಿದೆ.