

ಬಂಟ್ವಾಳ: ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಬುಧವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಲಾಯಿತು.
ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ನರೇಂದ್ರನಾಥ್ ಮಿತ್ತೂರು ಉದ್ಘಾಟಿಸಿ ಮಾತನಾಡಿ, ದೇಶಪ್ರೇಮ, ಪರಾಕ್ರಮ, ಚಾಣಾಕ್ಷತೆಯಿಂದ ಇತಿಹಾಸದಲ್ಲಿ ತನ್ನದೇ ಆದ ಛಾಪು ಮೂಡಿಸಿದವರು ಶಿವಾಜಿ ಮಹಾರಾಜರು. ತಾಯಿ ಮತ್ತು ಗುರುಗಳ ಮಾರ್ಗದರ್ಶನದಿಂದ ಪರಾಕ್ರಮಿಯಾಗಿ ಬೆಳೆದು ಇಂದಿಗೂ ಜನಮಾನಸದಲ್ಲಿ ನೆಲೆನಿಂತ ಇವರ ಕಥಾನಕವು ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.
ಉಪತಹಸೀಲ್ದಾರ್ ರಾಜೇಶ್ ನಾಯ್ಕ, ಕಂದಾಯ ನಿರೀಕ್ಷಕ ವಿಜಯ್ ಆರ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿ, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.