

ಮದ್ದೂರು : ತಾಲೂಕಿನ ಆತಗೂರು ಹೋಬಳಿಯ ಚಿಕ್ಕ ಅಂಕನಹಳ್ಳಿ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ನಂದಿ ಬಸವೇಶ್ವರ ಜಾತ್ರೆ ಜ.16 ರಿಂದ 25 ವರೆಗೆ ಆಯೋಜನೆಗೊಂಡಿದೆ ಎಂದು ತಹಸೀಲ್ದಾರ್ ಕೆ.ಎಸ್.ಸೋಮಶೇಖರ್ ತಿಳಿಸಿದರು. ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 2024ನೇ ಸಾಲಿನ ಜಾತ್ರೆಯ ಹರಾಜು ಪ್ರಕ್ರಿಯೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಚಿಕ್ಕ ಅಂಕನಹಳ್ಳಿ ನಂದಿ ಬಸವೇಶ್ವರ ಭಾರಿ ದನಗಳ ಜಾತ್ರೆ ವರ್ಷದ ಮೊದಲ ಜಾತ್ರೆಯಾಗಿರುವುದರಿಂದ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಜಾನುವಾರುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತವೆ. ಜಾತ್ರೆಗೆ ಯಾವುದೇ ರೀತಿಯ ತೊಂದರೆ ಆಗದಂತೆ ತಾಲೂಕು ಆಡಳಿತ ಅಗತ್ಯ ಕ್ರಮ ವಹಿಸಲಿದೆ ಎಂದರು.