

ಜೇವರ್ಗಿ: ಕಟ್ಟಿಸಂಗಾವಿ ಭೀಮಾ ಸೇತುವೆ ಬಳಿಯ ಪ್ರಭು ಬಸಯ್ಯ ತಾತಾ ಮಠದಲ್ಲಿ ಶನಿವಾರ ಶ್ರೀ ಸಿದ್ದಯ್ಯಪ್ಪ ಸ್ವಾಮಿಗಳ ಪುಣ್ಯಸ್ಮರಣೋತ್ಸವ ನಡೆಯಲಿದೆ ಎಂದು ಭಕ್ತರು ತಿಳಿಸಿದ್ದಾರೆ.
ಬೆಳಗ್ಗೆ 8.30ಕ್ಕೆ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ವಿಶೇಷ ಪೂಜೆ, ಅಲಂಕಾರ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ 9ಕ್ಕೆ ವಿವಿಧ ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗುರುಗಳ ಕೃಪೆಗೆ ಪಾತ್ರರಾಗಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.