ಕಾಶಿ ವಿಶ್ವನಾಥನಿಗೆ ಜಾವಾಭಿಷೇಕ

08M.D.R.8
ಮದ್ದೂರು ಪಟ್ಟಣದ ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿರುವುದು.
Published on

ಮದ್ದೂರು: ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ಪಟ್ಟಣದ ಹಳೇ ಬಸ್ ನಿಲ್ದಾಣ ಬಳಿಯಿರುವ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಶಂಕರ ಸಭಾ ವತಿಯಿಂದ ವಿಶೇಷ ಪೂಜಾ ಕೈಂಕರ್ಯ ಹಮ್ಮಿಕೊಳ್ಳಲಾಗಿತ್ತು.

ಬೆಳಗ್ಗೆ 9 ಗಂಟೆಗೆ ರುದ್ರಹೋಮ, 10 ಗಂಟೆಗೆ ಕಾಶಿ ವಿಶ್ವನಾಥನಿಗೆ ಮಹಾರುದ್ರಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಕಾಶಿ ವಿಶ್ವನಾಥನಿಗೆ ವಿಶೇಷ ಅಲಂಕಾರದೊಂದಿಗೆ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಕಾಶಿ ವಿಶ್ವನಾಥನಿಗೆ ಮೂರು ಜಾವಾಭಿಷೇಕ ಹಾಗೂ ಮೂರು ವಿಶೇಷ ಅಲಂಕಾರ ಮಾಡುವ ಮೂಲಕ ಧಾರ್ಮಿಕ ಕೈಂಕರ್ಯ ನೆರವೇರಿಸಲಾಯಿತು.

ಶಿವರಾತ್ರಿ ಜಾಗರಣೆ ಅಂಗವಾಗಿ ರಾತ್ರಿ ಪೂರ್ತಿ ದೇವಸ್ಥಾನದಲ್ಲಿ ಶ್ರುತಿ ಸಾಗರ ಭಜನಾ ಮಂಡಳಿ ವತಿಯಿಂದ ಸಂಗೀತ, ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದೇಗುಲದ ಪ್ರಧಾನ ಅರ್ಚಕ ರಾಘವೇಂದ್ರ ರಾವ್ ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು. ಪಟ್ಟಣದ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net