ಜವಾಹರ ನವೋದಯ ವಿದ್ಯಾಲಯ ಲ್ಯಾಟರಲ್ ಎಂಟ್ರಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

Published on

ಹಾವೇರಿ: ಜಿಲ್ಲೆಯ ಹಾನಗಲ್ಲ ತಾಲೂಕು ಮಹಾರಾಜಪೇಟೆ ಬಳಿಯ ಜವಾಹರ ನವೋದಯ ವಿದ್ಯಾಲಯ ಮತ್ತು ಕರ್ನಾಟಕದ ಜವಾಹರ ನವೋದಯ ವಿದ್ಯಾಲಯಗಳಿಗೆ 2024-25ನೇ ಸಾಲಿಗೆ ಖಾಲಿ ಇರುವ ಸೀಟುಗಳಿಗೆ 9 ಮತ್ತು 11ನೇ ತರಗತಿಯ ಲ್ಯಾಟರಲ್ ಎಂಟ್ರಿ ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಅರ್ಜಿ ಭರ್ತಿ ಮಾಡುವ ಮೊದಲು ಮಾಹಿತಿ ಪುಸ್ತಕ ಓದಬೇಕು. ಗಣಕೀಕೃತ ಅರ್ಜಿಯನ್ನು .31ರ ಒಳಗಾಗಿ www.navodaya.gov.in ಅಥವಾ www.cbseitmsnic.in ಜಾಲತಾಣದಲ್ಲಿ ಸಲ್ಲಿಸಬೇಕು. ಪ್ರವೇಶ ಪರೀಕ್ಷೆ ಫೆಬ್ರವರಿ 10, 2024ರಂದು ನಡೆಯಲಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯ ಶೇಖರಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net