ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಖಂಡನೆ

HN 6-2
Published on

ವಿಜಯಪುರ: ನವದೆಹಲಿಯ ಜವಹರ್‌ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ನಡೆದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿಗಳ ಒಕ್ಕೂಟ(ಎಐಡಿಎಸ್‌ಒ) ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಎಐಡಿಎಸ್‌ಒ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೋಭಾ ಯರಗುದ್ರಿ ಮಾತನಾಡಿ, ಜೆಎನ್‌ಯು ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್‌ಗೆ ನುಗ್ಗಿ ಅಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಚ್.ಟಿ.ಭರತಕುಮಾರ ಮಾತನಾಡಿದರು. ಕಾವೇರಿ ರಜಪೂತ, ದೀಪಾ ವಡ್ಡರ, ದುಂಡೇಶ ಬಿರಾದಾರ, ಅಮೂಲ್ಯ, ಮಜಿದ ಅಲಿ ಮುಂತಾದವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net