

ಬೆಂಗಳೂರು: ಜಯನಗರ 4ನೇ ಬ್ಲಾಕ್‌ನಲ್ಲಿರುವ ಪ್ರಸಿದ್ಧ ಶ್ರೀವಿನಾಯಕ ಸ್ವಾಮಿ ದೇವಾಲಯದಲ್ಲಿ 48ನೇ ವರ್ಷದ ಪ್ರತಿಷ್ಠಾಪನಾ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆದವು.
ಕಳೆದ ನಾಲ್ಕೈದು ದಿನಗಳಿಂದ ಪ್ರತಿಷ್ಠಾಪನಾ ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿವಿಧ ಪೂಜೆ, ಹೋಮ-ಹವನ ಇತ್ಯಾದಿ ಧಾರ್ಮಿಕ ವಿಧಿ ವಿಧಾನಗಳು ನಡೆದಿದ್ದು, ಗುರುವಾರ ದೇವರಿಗೆ ವಿಶೇಷವಾಗಿ 1008 ಲೀ. ಹಾಲು, 108 ಲೀ ಮೊಸರು, 108 ಕೆ.ಜಿ.ತುಪ್ಪ ಮತ್ತು ಜೇನುತುಪ್ಪ ಹಾಗೂ 108 ಬಗೆಯ ಹಣ್ಣಿನ ರಸಗಳಿಂದ ಅಭಿಷೇಕ ನೆರವೇರಿಸಲಾಯಿತು. ಪ್ರಧಾನ ಅರ್ಚಕರಾದ ಶ್ರೀಚನ್ನವೀರ ದೇವರ ನೇತೃತ್ವದಲ್ಲಿ ಎಲ್ಲ ಪೂಜೆ-ಪುನಸ್ಕಾರಗಳು ಸಂಪನ್ನಗೊಂಡಿದ್ದು, ಮಧ್ಯಾಹ್ನ 12ಕ್ಕೆ ಮಹಾಮಂಗಳಾರತಿ ನಂತರ ಸಾವಿರಾರು ಭಕ್ತಾದಿಗಳಿಗೆ ಅನ್ನ ದಾಸೋಹ ನಡೆಯಿತು.