ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಜಯಣ್ಣ

16 yelandur 02
Published on


ಚಾಮರಾಜನಗರ : ನನ್ನ ಮೇಲೆ ವಿಶ್ವಾಸವಿಟ್ಟು ನನಗೆ ಕ್ಯಾಬಿನೆಟ್ ದರ್ಜೆ ಸ್ಥಾನಕ್ಕೆ ಸಮನಾದ ಸ್ಥಾನವನ್ನು ಕಲ್ಪಿಸಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲರಿಗೂ ನಾನು ಧನ್ಯವಾದ ತಿಳಿಸುತ್ತೇನೆ ಎಂದು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರೂ ಆದ ಮಾಜಿ ಶಾಸಕ ಎಸ್. ಜಯಣ್ಣ ತಿಳಿಸಿದರು.

ಯಳಂದೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ನನ್ನ ಮೇಲೆ ನಂಬಿಕೆ ಇಟ್ಟು ಈ ಸ್ಥಾನವನ್ನು ನೀಡಿದ್ದಾರೆ. ನಾನು ಈ ಹಿಂದೆ 2 ಬಾರಿ ಶಾಸಕನಾಗಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ ಅನುಭವವಿದೆ. ಕೆಲಸವನ್ನು ಪ್ರಾಮಾಣಿಕವಾಗಿ ನಾನು ನಿರ್ವಹಿಸುತ್ತೇನೆ ಎಂದರು.


ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಎಚ್.ವಿ.ಚಂದ್ರು ಅವರನ್ನೂ ಸನ್ಮಾನಿಸಲಾಯಿತು. ಜಿಪಂ ಮಾಜಿ ಉಪಾಧ್ಯಕ್ಷರಾದ ಜೆ.ಯೋಗೇಶ್, ಕೇತಮ್ಮ, ತಾಪಂ ಮಾಜಿ ಅಧ್ಯಕ್ಷ ನಿರಂಜನ್, ಸದಸ್ಯ ವೈ.ಕೆ.ಮೋಳೆ ನಾಗರಾಜು, ಮುಡಿಗುಂಡ ಶಾಂತರಾಜು, ಪಪಂ ಸದಸ್ಯರಾದ ಮಹೇಶ್, ಬಿ.ರವಿ, ಮಂಜು, ಮುಖಂಡರಾದ ಲಿಂಗರಾಜಮೂರ್ತಿ, ರಾಮಚಂದ್ರು, ಜಯರಾಮ್, ನಂಜಯ್ಯ, ಮಹದೇವಸ್ವಾಮಿ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net