ಬೆಳಗಾವಿಯಲ್ಲಿ ಸಂಭ್ರಮದ ಕನಕದಾಸ ಜಯಂತಿ

IMG-20251108-WA0005
Published on

ಬೆಳಗಾವಿ: ಸಮಾಜದಲ್ಲಿನ ಅಸಮಾನತೆಗಳ ವಿರುದ್ಧ ಜಾಗೃತಿಯ ಹೋರಾಟ ಮಾಡಿರುವ ಕನಕದಾಸರು ಸಮಾನತೆ ಮತ್ತು ಭಕ್ತಿ ಚಳವಳಿಗೆ ನೀಡಿದ ಕೊಡುಗೆ ಅಮೂಲ್ಯ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವಿತಿಯಿಂದ ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ಸಿದ್ದಣ್ಣ ತೇಜಿ ಮಾತನಾಡಿ, ತಮ್ಮ ಕೀರ್ತನೆಗಳ ಮೂಲಕ ಶ್ರೀಕೃಷ್ಣನನ್ನು ಒಲಿಸಿಕೊಂಡು ಕನಕನ ಕಿಂಡಿ ಸೃಷ್ಟಿ ಮಾಡಿದರು. ವಚನ ಕ್ರಾಂತಿ ಮಾಡಿದ ಬಸವಣ್ಣನವರ ಮಾದರಿಯಲ್ಲೇ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಭಕ್ತಿ ಚಳವಳಿಯ ಕ್ರಾಂತಿ ಮಾಡಿದ್ದಾರೆ ಎಂದು ಹೇಳಿದರು.

ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಸವರಾಜ ಕುರಿಹುಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಯಲ್ಲಪ್ಪ ಕುರುಬರ, ಮಲ್ಲೇಶ ಚೌಗಲೆ ಇತರರಿದ್ದರು.

ಮೆರವಣಿಗೆ:

ಕಾರ್ಯಕ್ರಮಕ್ಕೂ ಮುಂಚೆ ಕನಕದಾಸ ವೃತ್ತದಿಂದ ಕಲಾಮಂದಿರವರೆಗೆ ಸಾಗಿದ ಮೆರವಣಿಗೆಗೆ ಮಹಾಪೌರ ಮಂಗೇಶ ಪವಾರ ಚಾಲನೆ ನೀಡಿದರು. ಉಪ ಮಹಾಪೌರ ವಾಣಿ ವಿಲಾಸ ಜೋಶಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಒ ರಾಹುಲ ಶಿಂಧೆ, ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net