ಜಯಂತೀಲಿ ಕಡ್ಡಾಯ ಪಾಲ್ಗೊಳ್ಳಿ

18Savadatti2
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 36;
Published on

ಸವದತ್ತಿ: ಸರ್ಕಾರದ ಕಾರ್ಯಕ್ರಮ ಮತ್ತು ಮಹಾತ್ಮರ ಜಯಂತಿಗಳಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಸೂಚಿಸಿದರು.

ಸ್ಥಳೀಯ ತಾಪಂ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವದ ಕುರಿತಾಗಿ ಶನಿವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿ, ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ರೈತರು, ಯೋಧರು ಹಾಗೂ ಸಾಧಕರನ್ನು ಸನ್ಮಾನಿಸಲಾಗುವುದು ಎಂದರು.

ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಮಾತನಾಡಿ, ಸರ್ಕಾರಿ ಸಭೆ, ಕಾರ್ಯಕ್ರಮಗಳಿಗೆ ಗೈರು ಹಾಜರಾಗುವ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು. ನ.1ರಂದು ಬೆಳಗ್ಗೆ ತಹಸೀಲ್ದಾರ್ ಕಚೇರಿಯಲ್ಲಿ ತಾಯಿ ಭುವನೇಶ್ವರಿದೇವಿಗೆ ಪೂಜೆ ಸಲ್ಲಿಸಲಾಗುವುದು. ಮೆರವಣಿಗೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಒಗ್ಗೂಡಿ ಯಶಸ್ವಿಗೊಳಿಸೋಣ ಎಂದರು.

ಉಪತಹಸೀಲ್ದಾರ್ ಎಂ.ಎನ್.ಮಠದ, ತಾಪಂ ಇಒ ಬಸವರಾಜ ಅಯ್ಯನಗೌಡರ, ಬಿಇಒ ಎ.ಎ.ಖಾಜಿ, ಕೃಷಿ ಸಹಾಯಕ ನಿರ್ದೇಶಕ ಶಿವಪ್ರಕಾಶ ಪಾಟೀಲ, ಸಿಡಿಪಿಒ ಅಮೃತ ಸಾಣಿಕೊಪ್ಪ, ಕಸಾಪ ಅಧ್ಯಕ್ಷ ವೈ.ಎಂ.ಯಾಕೊಳ್ಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net