ನೇತ್ರೋತ್ಸವ-ಸ್ನೇಹ ಸಮ್ಮಿಲನ ಇಂದು

jayapriya hospital
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ನಗರದ ಜಯಪ್ರಿಯಾ ಆಸ್ಪತ್ರೆ ವತಿಯಿಂದ ಸೆ. 14ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ದೇಶಪಾಂಡೆನಗರ ಸವಾಯಿ ಗಂಧರ್ವ ಸಭಾಭವನದಲ್ಲಿ ನೇತ್ರೋತ್ಸವ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯ ಡಾ. ವೆಂಕಟರಾಮ ಕಟ್ಟಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ಪತ್ರೆಯ ಬೆಳವಣಿಗೆಯಲ್ಲಿ ಪ್ರೋತ್ಸಾಹಿಸುತ್ತ ಬಂದಿರುವ ನಗರದ ಜನರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಗುತ್ತಿದೆ. ಧಾರವಾಡ ಮುರಘಾಮಠದ ಶ್ರೀ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಉದ್ಘಾಟಿಸುವರು. ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠದ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಬಂಕಾಪುರ ಅರಳೆಲೆ ಹಿರೇಮಠದ ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ, ಸಂಶಿ ಬ್ರಹ್ಮಾನಂದ ಆಶ್ರಮದ ಶ್ರೀ ಗುರುಸಿದ್ದೇಶ್ವರ ಸ್ವಾಮೀಜಿ, ಹಾವೇರಿ ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮೀಜಿ, ನರಗುಂದ ವಿರಕ್ತಮಠದ ಶ್ರೀ ಶಿವಕುಮಾರ ಸ್ವಾಮೀಜಿ, ಅಮ್ಮಿನಬಾವಿ ಪಂಚಗ್ರಹ ಹಿರೇಮಠ ಶ್ರೀ ಶಾಂತಲಿಂಗ ಸ್ವಾಮೀಜಿ ಪಾಲ್ಗೊಳ್ಳುವರು. ಜಯಪ್ರಿಯಾ ಆಸ್ಪತ್ರೆಯ ಸಂಸ್ಥಾಪಕ ಡಾ. ಶ್ರೀಕೃಷ್ಣ ನಾಡಗೌಡ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕ್ಯಾನ್​ಫಿನ್ ಹೋಮ್್ಸ ವ್ಯವಸ್ಥಾಪಕ ಎ.ಸಿ. ಹಿರೇಮಠ, ಖ್ಯಾತ ಲೆಕ್ಕ ಪರಿಶೋಧಕ ಎನ್.ಎ. ಚರಂತಿಮಠ ಭಾಗವಹಿಸುವರು ಎಂದರು.

ನಿವೃತ್ತ ಯೋಧ ರವಿಚಂದ್ರ ಬಾಲೆಹೊಸೂರ, ಪ್ಯಾರಾ ಶೂಟಿಂಗ್ ಪಟು ಶಂಕರಲಿಂಗ ತವಳಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಶೇಖಪ್ಪ ಕೇಸರಿ, ಸುರೇಶ ಮುಗಳಿ, ಸಮಾಜ ಸೇವಕ ಪ್ರಕಾಶ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ವಿನಾಯಕ ಕುಲಕರ್ಣಿ ಹಾಗೂ ವಾದಿರಾಜ ಬಬಲಾದಿ ಅವರು ಹಾಸ್ಯ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಕಣ್ಣಿನ ಬಗ್ಗೆ ಜಾಗೃತಿ ಮೂಡಿಸಲು ಉಪನ್ಯಾಸ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವೈದ್ಯರಾದ ಡಾ. ಪ್ರಿಯಾ ಕಟ್ಟಿ, ಡಾ. ಅನುಜಾ ದೇಸಾಯಿ ಹಾಗೂ ಕಾರ್ಯಾಚರಣೆ ವ್ಯವಸ್ಥಾಪಕ ಸುಶಾಂತ ಮಂಟಗಣಿಕರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net