ಗ್ರಾ.ಪಂ. ಅಧ್ಯಕ್ಷರಾಗಿ ಜಯರಾಜು ಆಯ್ಕೆ

ಗ್ರಾ.ಪಂ. ಅಧ್ಯಕ್ಷರಾಗಿ ಜಯರಾಜು ಆಯ್ಕೆ
Published on

ಕೆ.ಎಂ.ದೊಡ್ಡಿ: ಸಮೀಪದ ಕಾಡುಕೊತ್ತನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶಾಸಕ ಕೆ.ಎಂ.ಉದಯ್ ಬೆಂಬಲಿತ ಜಯರಾಜು ಅವಿರೋಧವಾಗಿ ಆಯ್ಕೆಯಾದರು.

ಗ್ರಾಪಂನ ಹಿಂದಿನ ಅಧ್ಯಕ್ಷ ಕೆ.ಸಿ.ವೀರಭದ್ರ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶಾಸಕ ಉದಯ್ ಅವರ ಬೆಂಬಲಿತ ಜಯರಾಜು ಹೊರತು ಪಡಿಸಿ ಇತರೆ ಯಾವ ಸದಸ್ಯರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಗಳಾದ ಮದ್ದೂರು ತಾಪಂ ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕಿ ರಾಜೇಶ್ವರಿ ಅವರು ಜಯರಾಜು ಅವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.

ನಂತರ ನೂತನ ಗ್ರಾಪಂ ಅಧ್ಯಕ್ಷ ಜಯರಾಜು ಅಭಿನಂದನೆ ಸ್ವೀಕರಿಸಿ ಮಾತನಾಡಿ, ನನ್ನನ್ನು ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಬೆಂಬಲಿಸಿದ ಎಲ್ಲಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಕಾಡುಕೋತ್ತನಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು, ಸ್ವಚ್ಛತೆಗೆ ಆದ್ಯತೆ, ಹಾಗೂ ಮೂಲ ಸೌಕರ್ಯಗಳನ್ನು ಸಮಪರ್ಕವಾಗಿ ತಲುಪಿಸಲು ಅಧಿಕಾರಿಗಳ ಜತೆಗೂಡಿ ಶಕ್ತಿಮೀರಿ ಶ್ರಮಿಸುತ್ತೇನೆ ಎಂದು ಹೇಳಿದರು.

ಗ್ರಾಪಂ ಮಾಜಿ ಅಧ್ಯಕ್ಷ ಕೆ.ಸಿ.ವೀರಭದ್ರ, ನವೀನ್ ಕುಮಾರ್, ದಯಾನಂದ, ಉಪಾಧ್ಯಕ್ಷ ಲೋಕೇಶ್, ಸದಸ್ಯ ಈ.ರುದ್ರಯ್ಯ, ಈ.ರಾಜು, ಡಿ.ಕೆಂಪರಾಜು, ಎಂ.ಸಿಂದೂ, ಶಾರದಮ್ಮ, ಜಯಲಕ್ಷ್ಮೀ ಪಿಡಿಒ ಅಶ್ವಿನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net