ಯಡವನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ ಜಯಶಂಕರ್ ಅಧ್ಯಕ್ಷ

ಯಡವನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ಜಯಶಂಕರ್ ಅವರನ್ನು ಅಭಿಮಾನಿಗಳು ಸನ್ಮಾನಿಸಿದರು. ಗಂಗಾಧರ್, ಮಂಜುನಾಥ್, ದೇವರಾಜ್ ಇತರರಿದ್ದರು.
ಯಡವನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ಜಯಶಂಕರ್ ಅವರನ್ನು ಅಭಿಮಾನಿಗಳು ಸನ್ಮಾನಿಸಿದರು. ಗಂಗಾಧರ್, ಮಂಜುನಾಥ್, ದೇವರಾಜ್ ಇತರರಿದ್ದರು.
Published on

ಅರಸೀಕೆರೆ: ತಾಲೂಕಿನ ಗಂಡಸಿ ಹೋಬಳಿ ಯಡವನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಸಣ್ಣೇನಹಳ್ಳಿ ಜಯಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರ ಸಂಘದಲ್ಲಿ ಹನ್ನೆರಡು ನಿರ್ದೇಶಕರಿದ್ದು ಜಯಶಂಕರ್ ಹೊರತುಪಡಿಸಿ ಬೇರಾರೂ ಉಮೇದುವಾರಿಕೆ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ದೇವರಾಜು ಅವಿರೋಧ ಆಯ್ಕೆ ಘೋಷಿಸಿದರು.

ಸುದ್ದಿ ತಿಳಿಯುತ್ತಿದ್ದಂತೆ ಹೊರಗೆ ಜಮಾಯಿಸಿದ್ದ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ನಿರ್ದೇಶಕ ಮಂಜುನಾಥ್, ಜೆಡಿಎಸ್ ಮುಖಂಡ ಹೊಸೂರು ಗಂಗಾಧರ್ ಸೇರಿದಂತೆ ಹಲವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net