ಜಯಶ್ರೀ ಗುತ್ತಲ ಜಾನಪದ ಪುರಸ್ಕಾರ ಪ್ರದಾನ 26ರಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂಘವು ಜಯಶ್ರೀ ಗುತ್ತಲ ಜಾನಪದ ಪುರಸ್ಕಾರ ದತ್ತಿ ನಿಮಿತ್ತ ಸೆ. 26ರಂದು ಸಂಜೆ 6 ಗಂಟೆಗೆ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜಯಶ್ರೀ ಗುತ್ತಲ ಜಾನಪದ ಪುರಸ್ಕಾರ-2024 ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ.
ಸಂಘದ ಗೌರವ ಉಪಾಧ್ಯಕ್ಷ ಪಂ. ಎಂ. ವೆಂಕಟೇಶಕುಮಾರ ಪ್ರಶಸ್ತಿ ಪ್ರದಾನ ಮಾಡುವರು. ಡಾ. ಆನಂದ ಪಾಂಡುರಂಗಿ ಅತಿಥಿಯಾಗಿ ಆಗಮಿಸುವರು. ಸಂಘದ ಉಪಾಧ್ಯಕ್ಷೆ ಪ್ರೊ. ಮಾಲತಿ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸುವರು.
ಇದಕ್ಕೂ ಪೂರ್ವದಲ್ಲಿ ಮಧ್ಯಾಹ್ನ 3 ಗಂಟೆಗೆ ಮೂಲ ಜಾನಪದ ಹಾಡುಗಳ ಸ್ಪರ್ಧೆ ನಡೆಯಲಿದ್ದು, ಡಾ. ಮಲ್ಲಿಕಾರ್ಜುನ ತರ್ಲಘಟ್ಟ ಅಧ್ಯಕ್ಷತೆ ವಹಿಸುವರು. ಸಂಗೀತಗಾರ ಡಾ. ಶ್ರೀಧರ ಕುಲಕರ್ಣಿ ಹಾಗೂ ಜಾನಪದ ತಜ್ಞ ಡಾ. ಪ್ರಕಾಶ ಮಲ್ಲಿಗವಾಡ ಆಗಮಿಸುವರು. ಎಸ್​ಡಿಎಂ ದಂತ ಕಾಲೇಜಿನ ಪ್ರಾಧ್ಯಾಪಕಿ ಡಾ. ಕೃತಿಕಾ ಗುತ್ತಲ ಬಹುಮಾನ ವಿತರಣೆ ಮಾಡುವರು. ಎಸ್​.ಬಿ. ಗುತ್ತಲ ಉಪಸ್ಥಿತರಿರುವರು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಮಂಡಳಕ್ಕೆ ಜಯಶ್ರೀ ಗುತ್ತಲ ಜಾನಪದ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net