ವಿಟ್ಲ: ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರ ಕಚೇರಿ(ಆಡಳಿತ) ಮಂಗಳೂರು, ಕ್ಷೇತ್ರ ಶಿಕ್ಷಣಾಽಕಾರಿಗಳ ಕಚೇರಿ ಬಂಟ್ವಾಳ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಯೋಗದಲ್ಲಿ 2024-25ನೇ ಸಾಲಿನ ರಾಜ್ಯಮಟ್ಟದ ಬಾಲಕ-ಬಾಲಕಿಯರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ವೆಯ್ಟ್ ಲಿಫ್ಟಿಂಗ್ ಸ್ಪರ್ಧೆ ಅ.25, 26ರಂದು ನಡೆಯಲಿದೆ.
25ರಂದು ಮಧ್ಯಾಹ್ನ 2ಕ್ಕೆ ಪ್ರೌಢಶಾಲೆಯ ಜೇಸಿ ಪೆವಿಲಿಯನ್‌ನಲ್ಲಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ವಿಠ್ಠಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅಧ್ಯಕ್ಷ ಶ್ರೀಧರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಽಕಾರಿಗಳು ಬಂಟ್ವಾಳ, ಮುಖ್ಯ ಕಾರ್ಯನಿರ್ವಹಣಾಽಕಾರಿಗಳು(ಆಡಳಿತ) ಉಪನಿರ್ದೇಶಕರ ಕಚೇರಿ ಮಂಗಳೂರು, ರಾಜ್ಯಮಟ್ಟದ ವಿವಿಧ ದೈಹಿಕ ಶಿಕ್ಷಣ ಇಲಾಖೆಯ ಅಽಕಾರಿಗಳು, ಸ್ಥಳೀಯ ಸಂಸ್ಥೆಗಳ ಉದ್ಯಮಿಗಳು ಮತ್ತು ಸಂಸ್ಥೆಯ ನಿರ್ದೇಶಕರುಗಳು ಭಾಗವಹಿಸಲಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ ಪ್ರೌಢಶಾಲಾ ವಿಭಾಗದ 130ಕ್ಕಿಂತಲೂ ಹೆಚ್ಚು ಪ್ರೌಢಶಾಲೆಯ ಬಾಲಕ-ಬಾಲಕಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ಬಾಲಕರ ವಿಭಾಗವು 49 ಕೆಜಿ, 55 ಕೆಜಿ, 61 ಕೆಜಿ, 67 ಕೆಜಿ, 73 ಕೆಜಿ, 81 ಕೆಜಿ, 89 ಕೆಜಿ, 96 ಕೆಜಿ, 102 ಕೆಜಿ,+102 ಕೆಜಿ ಹಾಗೂ ಬಾಲಕಿಯರ ವಿಭಾಗ 40 ಕೆಜಿ, 45 ಕೆಜಿ,49 ಕೆಜಿ, 55 ಕೆಜಿ,59 ಕೆಜಿ, 64 ಕೆಜಿ, 71 ಕೆಜಿ,76 ಕೆಜಿ, 81 ಕೆಜಿ,+81 ಕೆಜಿಗಳ ಕ್ರೀಡಾಳುಗಳ ನಡುವೆ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ವೆಯ್ಟ್ ಲಿಫ್ಟಿಂಗ್ ಸ್ಪರ್ಧೆಯ ಆಯೋಜನೆ ಇದಾಗಿದೆ. ಸ್ಪರ್ಧೆಯ ಸಮಾರೋಪ ಸಮಾರಂಭ 26ರಂದು ಸಾಯಂಕಾಲ 5ಕ್ಕೆ ನಡೆಯಲಿದೆ.