

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಕಾರ್ಯಾಗಾರದಲ್ಲಿ ಎಚ್.ಐ.ವಿ ಮತ್ತು ಏಡ್ಸ್ ಸೋಂಕಿನ ಬಗ್ಗೆ ಮಂಗಳವಾರ ನಡೆಯಿತು.
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕ ರಾಜೇಶ್ ಮಾತನಾಡಿ ಪ್ರೌಢಾವಸ್ಥೆಯಲ್ಲಿ ಮಕ್ಕಳಲ್ಲಿ ಬದಲಾಗುವ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗಳ ಬಗ್ಗೆ ವಿವರಿಸುತ್ತಾ ಈ ಹಂತದಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಹೆಚ್ಚಿನ ಮುಂಜಾಗ್ರತೆಯನ್ನು ವಹಿಸಬೇಕು ಎಂದು ತಿಳಿಸಿದರು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎಲ್. ಎನ್. ಕೂಡೂರು, ಜೊತೆ ಕಾರ್ಯದರ್ಶಿಗಳಾದ ಶ್ರೀಪ್ರಕಾಶ್ ಕುಕ್ಕಿಲ, ಆಡಳಿತಾಧಿಕಾರಿ ರಾಧಾಕೃಷ್ಣ ಎ., ಪ್ರಾಂಶುಪಾಲ ಜಯರಾಮ ರೈ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.