ಸೋಂಕು ನಿಯಂತ್ರಿಸಲು ಜಿಲ್ಲಾಡಳಿತಕ್ಕೆ ಸ್ವಾತಂತ್ರ್ಯ ; ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಮನವಿಗೆ ಸಿಎಂ ಸ್ಪಷ್ಟನೆ

29TMK_CM_JCM 1
Published on

ತುಮಕೂರು : ಕರೊನಾ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ನಡೆಸಿದ ವಿಡಿಯೋ ಕಾನ್ಪರೆನ್ಸ್ ಸಭೆಗೆ ತುಮಕೂರು ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳ ಜತೆ ಭಾಗಿಯಾದರು.

ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಅಗತ್ಯ ನಿರ್ಧಾರ ತೆಗೆದುಕೊಳ್ಳಲು ಜಿಲ್ಲಾಡಳಿತಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದು ಸಿಎಂಗೆ ಮನವಿ ವಾಡಿದರು.

ಬೆಂಗಳೂರಿನಿಂದ ಜಿಲ್ಲೆಗೆ ಬರುತ್ತಿರುವವರ ಸಂಖ್ಯೆ ಮಿತಿಮೀರಿದೆ, ಇದರಿಂದ ಹಳ್ಳಿಗಳಲ್ಲಿ ಸೋಂಕು ಹರಡದಂತೆ ಕ್ರಮಕೈಗೊಳ್ಳಲು ಚೆಕ್‌ಪೋಸ್ಟ್ ಸ್ಥಾಪಿಸಲು ಅನುಮತಿ ನೀಡಬೇಕು ಎಂದು ಕೋರಿದರು.

ಕಳೆದ ಬಾರಿಯಂತೆ ಈ ಬಾರಿಯೂ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ಆಸ್ಪತ್ರೆಯನ್ನಾಗಿ ವಾರ್ಪಾಡು ವಾಡಿ, ಶ್ರೀದೇವಿ ವೈದ್ಯಕೀಯ ಕಾಲೇಜನ್ನು ತಾತ್ಕಾಲಿಕವಾಗಿ ಸರ್ಕಾರಿ ಆಸ್ಪತ್ರೆಯನ್ನಾಗಿ ವಾರ್ಪಾಡು ವಾಡಿದರೆ ಹಾಸಿಗೆ ಸಮಸ್ಯೆ ನಿಯಂತ್ರಿಸಬಹುದು ಎಂದು ಸಿಎಂ ಗಮನಕ್ಕೆ ತಂದರು.

ಜಿಲ್ಲೆಯಲ್ಲಿ ಆಮ್ಲಜನಕ, ರೆಮಿಡಿಸಿಯರ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ, ಸರ್ಕಾರ ಜಿಲ್ಲೆಯ ಬೇಡಿಕೆಗೆ ತಕ್ಕಂತೆ ಆಮ್ಲಜನಕ ಮತ್ತು ರೆಮಿಡಿಸಿಯರ್ ಪೂರೈಸಬೇಕು, ಜಿಲ್ಲೆಯಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆ ವಾಡಲು ಒಂದು ಮೊಬೈಲ್ ವ್ಯಾನ್ ಅವಶ್ಯಕವಿದೆ. ಇದರಿಂದ ಮಧುಗಿರಿ, ಪಾವಗಡ, ಶಿರಾ ತಾಲೂಕಿನ ಕೋವಿಡ್ ಪರೀಕ್ಷೆಗಳನ್ನು ವಾಡಲು ಸುಲಭವಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು, ಜಿಲ್ಲಾಡಳಿತಕ್ಕೆ ಈ ನಿಟ್ಟಿನಲ್ಲಿ ಸ್ವಾತಂತ್ರ್ಯವಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ವಾತನಾಡಿ ತುಮಕೂರು ನಗರ ಸೇರಿ ಪ್ರತಿ ತಾಲೂಕಿನಲ್ಲಿಯೂ ಕೋವಿಡ್ ಕೇರ್ ಕೇಂದ್ರ ಸ್ಥಾಪಿಸಲಾಗಿದ್ದು, ಹೋಂ ಐಸೋಲೇಷನ್‌ನಲ್ಲಿರುವವರನ್ನು ಕೋವಿಡ್ ಕೇರ್‌ಗೆ ಸ್ಥಳಾಂತರ ವಾಡಲಾಗುತ್ತಿದೆ ಎಂದು ಸಿಎಂ ಗಮನಕ್ಕೆ ತಂದರು.

ಹೋಂ ಐಸೊಲೇಶನ್‌ನಲ್ಲಿರುವ ಸೋಂಕಿತರ ದಿನಚರಿ ಆರೋಗ್ಯ ವಿಚಾರಣೆ ನಡೆಸಲು ಹೆಲ್ತ್ ವಾರ್ ರೋಮ್‌ಗಳನ್ನು ಸ್ಥಾಪನೆ ವಾಡಲಾಗಿದೆ, ಈ ಹೆಲ್ತ್‌ವಾರ್ ರೂಂಗಳ ಮೂಲಕ ಸೋಂಕಿತರ ಆರೋಗ್ಯ ವಿಚಾರಣೆ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ. ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ದಿನಕ್ಕೊಮ್ಮೆ ಕರೆ ವಾಡಿ ವಿಚಾರಣೆ ವಾಡಲಾಗುತ್ತಿದೆ, ಹೋಂ ಐಸೋಲೇಷನ್‌ನಲ್ಲಿರುವ ಸೋಂಕಿತರ ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ತಕ್ಷಣ ಆಸ್ಪತ್ರೆಗೆ ದಾಖಲಿಸುವ ಕಾರ್ಯ ವಾಡಲಾಗುತ್ತಿದೆ ಎಂದು ತಿಳಿಸಿದರು.

ಈ ವಿಡಿಯೋ ಕಾನ್ಪರೆನ್ಸ್‌ನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ, ಜಿಪಂ ಸಿಇಒ ಕೆ.ವಿದ್ಯಾಕುವಾರಿ, ಉಪ ವಿಭಾಗಾಧಿಕಾರಿ ಅಜಯ್, ಡಿಎಚ್‌ಒ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸುರೇಶ್‌ಬಾಬು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net