ಕೆಲಸದ ಅವಧಿ ಹೆಚ್ಚಳ ಪ್ರಸ್ತಾವ ಕೈಬಿಡಿ

JCTU
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಕರ್ನಾಟಕದಲ್ಲಿ 10 ಗಂಟೆಗಳ ಕೆಲಸದ ಅವಧಿ ಹಾಗೂ ಕಾರ್ಖಾನೆ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವಗಳನ್ನು ರಾಜ್ಯ ಸರಕಾರ ಕೈ ಬಿಡಬೇಕು ಎಂದು ಸಿಐಟಿಯು ಮುಖಂಡ ಮಹೇಶ ಪತ್ತಾರ ಒತ್ತಾಯಿಸಿದರು.

ಧಾರವಾಡ ಜಿಲ್ಲಾ ಕಾರ್ವಿುಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ಅಮರಗೋಳದ ಶ್ರಮಿಕ ಭವನದಲ್ಲಿ ಭಾನುವಾರ ಆಯೋಜಿಸಿದ್ದ ರೈತ ಕಾರ್ವಿುಕ ಸಂಘಟನೆಗಳ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದ ಅವರು ಇದರ ವಿರುದ್ದ ಕಾರ್ವಿುಕ ವರ್ಗ ತೀವ್ರ ಹೋರಾಟವನ್ನು ರೂಪಿಸುತ್ತಿದೆ ಎಂದರು.

ಎಐಯುಟಿಯುಸಿ ಮುಖಂಡ ಗಂಗಾಧರ ಬಡಿಗೇರ ಮಾತನಾಡಿ ಕಾರ್ವಿುಕ ಸಂಹಿತೆಗಳನ್ನು ರದ್ದುಪಡಿಸಬೇಕು, ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿರುವ ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣ, ಮಾರಾಟ ನಿಲ್ಲಿಸಬೇಕು, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿಯಾಗಬೇಕು, ಜೀವನ ಯೋಗ್ಯ ಕನಿಷ್ಠ ವೇತನ ರೂ 31,500ಕ್ಕೆ ಹೆಚ್ಚಿಸಬೇಕು ಎಂಬಿತ್ಯಾದಿ ಬೇಡಿಕೆಗಳಿಗೆ ಒತ್ತಾಯಿಸಿ ಜುಲೈ 9ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರ ನಡೆಸಲು ಕರೆ ನೀಡಲಾಗಿದೆ ಎಂದರು.

ಶರಣು ಗೋನವಾರ ಮಾತನಾಡಿ ಈ ಮುಷ್ಕರವನ್ನು ರೈತ ಸಂಘಟನೆಗಳು ಬೆಂಬಲಿಸಲಿವೆ ಎಂದರು. ಮುಷ್ಕರದ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ವಿುಕ ಮುಖಂಡ ಬಿ.ಎನ್. ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ಅಶೋಕ ರ್ಬಾ, ಮುಖಂಡರಾದ ದೀಪಾ, ಎ.ಎಸ್. ಪೀರಜಾದೆ, ಬಶೀರ ಮುಧೋಳ, ರಮೇಶ ಬೋಸ್ಲೆ, ತಾಯಿದಾಸ್, ಆನಂದ ಅರ್ಚಕ, ಎ.ಎಂ.ಖಾನ್, ಗುರುಸಿದ್ದಪ್ಪ ಅಂಬಿಗೇರ, ಬಸವಣ್ಣೆಪ್ಪ ನೀರಲಗಿ, ಮಂಜುನಾಥ ಹುಜರಾತಿ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net