ಜೆಡಿಎಸ್ ಕಾರ್ಯಕರ್ತರ ಒಗ್ಗೂಡಿಸಿ: ಸಿರಗುಪ್ಪದಲ್ಲಿ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಕಿವಿಮಾತು

171221 Siraguppa JDS Leaders Meeting
ಸಿರಗುಪ್ಪ ಅಭಯಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಜೆಡಿಎಸ್ ಮುಖಂಡರ ಸಭೆಯನ್ನು ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಉದ್ಘಾಟಿಸಿದರು.
Published on

ಸಿರಗುಪ್ಪ: ಇಲ್ಲಿನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರಿದ್ದು, ಅವರನ್ನು ಗುರುತಿಸಿ ಸಕ್ರಿಯವಾಗಿ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಮುಖಂಡರು ಶ್ರಮಿಸಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಹೇಳಿದರು.

ನಗರದ ಅಭಯಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದರು. ನಮ್ಮ ಪಕ್ಷದವರು ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದ್ದರಿಂದ ಪಕ್ಷದ ಮುಖಂಡರು ಸಿರಗುಪ್ಪ ವಿಧಾನಸಭಾ ಕ್ಷೇತ್ರದ ಪ್ರತಿ ಹಳ್ಳಿಗೆ ತೆರಳಿ ಪಕ್ಷದ ್ನಕಾರ್ಯಕರ್ತರನ್ನು ಗುರುತಿಸಿ ಒಗ್ಗೂಡಿಸುವ ಕೆಲಸ ಮಾಡಬೇಕು. ಇದರಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಲು ಅನುಕೂಲವಾಗಲಿದೆ. ಜಿಲ್ಲೆಯ ಎಲ್ಲ ತಾಲೂಕು ಘಟಕಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರನ್ನು ಶೀಘ್ರ ನೇಮಿಸಲಾಗುವುದು ಎಂದು ತಿಳಿಸಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದಿಂದ ಜಿಲ್ಲೆಯ ಎಲ್ಲ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಮೂರರಿಂದ 5 ಕ್ಷೇತ್ರಗಳಲ್ಲಿ ಗೆಲ್ಲಲು ಕಾರ್ಯಸೂಚಿ ಸಿದ್ಧಗೊಳಿಸುತ್ತಿದ್ದೇವೆ. ಎಚ್.ಡಿ.ಕುಮಾರಸ್ವಾಮಿ ಅಧಿಕಾರ ಅವಧಿಯಲ್ಲಿ ಜಾರಿಗೆ ತಂದಿದ್ದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು. ಜಿಲ್ಲಾ ಉಪಾಧ್ಯಕ್ಷೆ ಮುನ್ನಾಬಾಯಿ, ಯುವ ಘಟಕದ ಜಿಲ್ಲಾಧ್ಯಕ್ಷ ಡಿ.ವಿಜಯಕುಮಾರ್, ಮುಖಂಡರಾದ ಲಕ್ಷ್ಮೀಕಾಂತರೆಡ್ಡಿ, ಬಿ.ಪರಮೇಶ್ವರ ನಾಯಕ, ಪುರುಷೋತ್ತಮ ರೆಡ್ಡಿ, ಯಲ್ಲನಗೌಡ, ದಮ್ಮೂರು ರಾಘವರೆಡ್ಡಿ, ಶಿವನ್ನಾರಾಯಣ, ತಿಮ್ಮನಗೌಡ, ಎಸ್.ನಾಗಪ್ಪ, ರಾಮೇಶ್ವರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net