ಸಾಲದ ಕೂಪಕ್ಕೆ ತಳ್ಳಿದ ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿ

SIDDARAMAIAH cm
Published on

ಚಿತ್ರದುರ್ಗ: ಜಾತ್ಯತೀತ ತತ್ವವನ್ನು ಗಾಳಿಗೆ ತೂರಿ, ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದ ಕೋಮುವಾದಿ ಬಿಜೆಪಿಯೊಂದಿಗೆ ಜೆಡಿಎಸ್ ಒಂದಾಗಿರುವುದು ಅಪವಿತ್ರ ಮೈತ್ರಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಚಿತ್ರದುರ್ಗದ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ನನ್ನ ಅವಧಿಯಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಿಸಿತ್ತು. ಆದರೆ, ಬಿಜೆಪಿಯವರು ವಿಪರೀತಿ ಸಾಲ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ. ಆದರೂ ಗ್ಯಾರಂಟಿಗಳ ಜತೆಗೆ ಅನುದಾನ ಬಿಡುಗಡೆಗೆ ಕ್ರಮವಹಿಸಲಾಗಿದೆ ಎಂದರು.

ಹೆಚ್ಚುವರಿ ಅನುದಾನ ಸಿಗುತ್ತಿಲ್ಲವೆಂಬ ಅಳಲು ಕೆಲವರು ತೋಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ಕಾಂಗ್ರೆಸ್‌ನ ಕೆಲ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net