

ಶಿವಮೊಗ್ಗ: ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯಲಿದೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ತುಂಬಾ ಬಲವಾಗಿದೆ. ಯಾವುದೇ ಕಾರಣಕ್ಕೂ ಮೈತ್ರಿಯಲ್ಲಿ ಅಪಸ್ವರ ಅಥವಾ ಬಿರುಕು ಉಂಟಾಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶಾಶ್ವತವಾದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ದೇವೇಗೌಡರು ಯಾವತ್ತೂ ಸ್ಥಿರವಾದ ನಿರ್ಧಾರವನ್ನೇ ತೆಗೆದುಕೊಳ್ಳುತ್ತಿದ್ದಾರೆ. ಅವರು ಅಸ್ಥಿರವಾದ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ಕಳೆದ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಭಾಗವಾಗಿ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿದ್ದೇವೆ. ಅದು ಮುಂಬುವರು ಎಲ್ಲ ಚುನಾವಣೆಗಳಲ್ಲೂ ಮುಂದುವರಿಯಲಿದೆ ಎಂದು ಹೇಳಿದರು.