

ಮಂಡ್ಯ: ನನ್ನ ಮೇಲೆ ಎಲ್ಲರೂ ಸೇರಿ ತೇಜೋವಧೆ ಮಾಡುತ್ತಿದ್ದಾರೆ. ಆದರೆ ಇದಕ್ಕೆಲ್ಲ ಮತದಾರರು ಉತ್ತರ ಕೊಡುತ್ತಾರೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಆರ್.ರಾಮಚಂದ್ರು ಹೇಳಿದರು.
ತಾಲೂಕಿನ ಕೋಣನಹಳ್ಳಿ ಗ್ರಾಮದಲ್ಲಿ ಮತಯಾಚನೆ ಮಾಡಿದ ಅವರು, ನಾನು ನಿರಂತರವಾಗಿ ಪ್ರಚಾರ ಮಾಡುತ್ತಿದ್ದೇನೆ. ಆದರೆ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಈ ರೀತಿ ಮಾಡುವುದು ಸರಿಯಿಲ್ಲ. ನಾನು ಏಕಾಂಗಿಯಲ್ಲ, ನಿಮ್ಮೆಲ್ಲರ ಪ್ರೀತಿ ವಿಶ್ವಾಸದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಅವಕಾಶ ಮಾಡಿಕೊಟ್ಟಿದೆ. ಜೆಡಿಎಸ್ ಪಕ್ಷ ಎಲ್ಲ ವರ್ಗದ ಜನರಿಗೆ ಅನುಕೂಲವಾಗಲಿರುವ ಪಂಚರತ್ನ ಯೋಜನೆ ರೂಪಿಸಿದೆ. ಅವುಗಳ ಅನುಷ್ಠಾನಕ್ಕೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ಜೆಡಿಎಸ್ ಪಕ್ಷಕ್ಕೆ ಮತ ನೀಡಿ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಹಳ್ಳಿಗಳು, ರೈತರು, ಮಕ್ಕಳ ಭವಿಷ್ಯ ಉಳಿಯಬೇಕು. ಅದಕ್ಕೆ ಕುಮಾರಸ್ವಾಮಿ ಆಗಬೇಕಾದರೆ ರಾಮಚಂದ್ರು ಅವರು ಶಾಸಕರಾಗಿ ಆಯ್ಕೆಯಾಗಬೇಕು ಎಂದು ಹೇಳಿದರು.
ಜೆಡಿಎಸ್ ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಜಯರಾಂ, ಗ್ರಾಪಂ ಸದಸ್ಯ ಮಂಜು, ಮನ್‌ಮುಲ್ ಉಪಾಧ್ಯಕ್ಷ ಎಂ.ಎಸ್.ರಘುನಂದನ್ ಇತರರಿದ್ದರು.