ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮೀಟಿ ಸಭೆ ಇಂದು

New DEveGauda88
Published on

ಹುಬ್ಬಳ್ಳಿ : ಜೆಡಿಎಸ್ ಕೋರ್ ಕಮೀಟಿ ಸಭೆ ಇಲ್ಲಿನ ಗೋಕುಲ ರಸ್ತೆಯ ಹೋಟೆಲ್ ಡೆನಿಸನ್ಸ್​ನಲ್ಲಿ ಏ. 30ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳ ಪ್ರಮುಖರ ಸಭೆ ಮಧ್ಯಾಹ್ನ 12 ಗಂಟೆ ನಂತರ ನಡೆಯಲಿದೆ.

ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಜಿ.ಟಿ. ದೇವೆಗೌಡ ಸೇರಿದಂತೆ ಮಾಜಿ ಸಚಿವರು, ಮಾಜಿ ಶಾಸಕರು, ಶಾಸಕರು ಹಾಗೂ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net