ಎಡಿಜಿಪಿ ಚಂದ್ರಶೇಖರ ವಿರುದ್ಧ ತನಿಖೆಗೆ ಜೆಡಿಎಸ್ ಆಗ್ರಹ

KMT JDS Manavi
Published on

ಕುಮಟಾ: ಕೇಂದ್ರ ಸಚಿವ, ಜೆಡಿಎಸ್ ಅಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ದಳದ ಎಡಿಜಿಪಿ ಎಂ. ಚಂದ್ರಶೇಖರ ಅವಾಚ್ಯ ಪದಗಳಿಂದ ನಿಂದಿಸಿರುವುದನ್ನು ಖಂಡಿಸಿ ಅವರ ವಿರುದ್ಧ ತನಿಖೆ ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಜೆಡಿಎಸ್ ಘಟಕದ ವತಿಯಿಂದ ಗುರುವಾರ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ನಮ್ಮ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿಯೂ ಆಗಿ ರಾಜ್ಯದ ಅಭಿವೃದ್ಧಿಗೆ ಶ್ರೇಷ್ಠ ಕೊಡುಗೆ ನೀಡಿದ್ದಾರೆ. ಆದರೆ, ಅವರ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿರುವ ಎಡಿಜಿಪಿ ಎಂ. ಚಂದ್ರಶೇಖರ ಅವರನ್ನು ತಕ್ಷಣ ಸೇವೆಯಿಂದ ಅಮಾನತುಗೊಳಿಸಬೇಕು. ಉನ್ನತ ಮಟ್ಟದ ತನಿಖೆ ನಡೆಸಬೇಕು. ಈ ಬಗ್ಗೆ ರಾಜ್ಯ ಸರ್ಕಾರದ ಸೂಕ್ತ ಶಿಫಾರಸಿನೊಂದಿಗೆ ಕೇಂದ್ರ ಗೃಹ ಸಚಿವಾಲಯಕ್ಕೆ ಪ್ರಸ್ತಾವನೆ ಕಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೂರಜ ನಾಯ್ಕ, ತಾಲೂಕಾಧ್ಯಕ್ಷ ಸಿ.ಜಿ. ಹೆಗಡೆ, ಕಾರ್ಯಾಧ್ಯಕ್ಷ ಬಲಿಂದ್ರ ಗೌಡ, ನಗರ ಅಧ್ಯಕ್ಷ ಯಶವಂತ ಗೌಡ, ಜಿಲ್ಲಾ ಕಾರ್ಯದರ್ಶಿ ಗೋವಿಂದ್ರಾಯ ಶಾನಭಾಗ, ರೋಶನ್ ನಾಯ್ಕ, ಚಿನ್ನು ಅಂಬಿಗ, ನಾಗೇಶ್ ನಾಯ್ಕ, ವಸಂತ ಗೌಡ, ದಿನಕರ ನಾಯ್ಕ, ನಾಗಪ್ಪ ಪಟಗಾರ, ಶಶಿ ಅಡುಗುಳಿ, ಚಂದ್ರಶೇಖರ ಪಾಲೇಕರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net