ಕಾರ್ಯಕರ್ತರೇ ನಮ್ಮ ಸ್ಟಾರ್‌ಗಳು: ಜೆಡಿಎಸ್ ಅಭ್ಯರ್ಥಿ ಬಿ.ಆರ್.ರಾಮಚಂದ್ರು ಹೇಳಿಕೆ

Ramachandru Mathayachane
Published on

ಮಂಡ್ಯ: ಪಕ್ಷದ ಕಾರ್ಯಕರ್ತರೇ ನಮ್ಮ ಸ್ಟಾರ್ ಪ್ರಚಾರಕರು. ಆದ್ದರಿಂದ ಅವರೇ ಚುನಾವಣೆಯನ್ನು ಯಶಸ್ವಿಯಾಗಿ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಬಿ.ಆರ್.ರಾಮಚಂದ್ರು ಹೇಳಿದರು.

ತಾಲೂಕಿನ ಆಲಕೆರೆ, ಹೊನಗಹಳ್ಳಿ ಮಠ, ಹೊಡಾಘಟ್ಟ, ಡಣಾಯಕನಪುರ, ಈಚಗೆರೆ, ಕೀಲಾರ, ಮುದ್ದಂಗೆರೆ, ನಲ್ಲಹಳ್ಳಿ, ಹೊನ್ನಾಯಕನಹಳ್ಳಿ, ಮಾರಗೌಡನಹಳ್ಳಿ, ದೊಡ್ಡಬಾಣಸವಾಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರೋಡ್ ಶೋ ನಡೆಸಿ ಮಾತನಾಡಿದರು. ಮತಯಾಚನೆಗೆ ಹೋದ ಕಡೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಪಂಚರತ್ನ ಯೋಜನೆಗಳಲ್ಲಿ ರೈತರಿಗಾಗಿ ಯೋಜನೆಗಳನ್ನು ರೂಪಿಸಲಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಲು ಸಹಕರಿಸಬೇಕು. ಈ ನಿಟ್ಟಿನಲ್ಲಿ ನನ್ನನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಮನ್‌ಮುಲ್ ಉಪಾಧ್ಯಕ್ಷ ಎಂ.ಎಸ್.ರಘುನಂದನ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ನೆಲ್ಲಿಗೆರೆ ಬಾಲು, ತಾಪಂ ಮಾಜಿ ಅಧ್ಯಕ್ಷ ಕೆ.ಎಲ್.ಕೃಷ್ಣ, ರಾಜು, ವಸಂತರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net