ಎಚ್‌ಡಿಕೆ ನಿಂದನೆ ವಿರುದ್ಧ ಸಿಡಿದ ಜೆಡಿಎಸ್

ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ, ತಾಪಂ ಮಾಜಿ ಉಪಾಧ್ಯಕ್ಷ ಕೆ.ಆರ್.ರೆಡ್ಡಿ, ತಾಲೂಕು ಜೆಡಿಎಸ್ ಅಧ್ಯಕ್ಷ ಕೊಳವನಹಳ್ಳಿ ಮುನಿರಾಜು ಮತ್ತಿತರರು ಭಾಗವಹಿಸಿದ್ದರು.
Published on

ಲೋಕಾಯುಕ್ತ ಎಡಿಜಿಪಿ ವಜಾಗೊಳಿಸಲು ಜಿಲ್ಲಾ ದಳಪತಿಗಳ ಪಟ್ಟು - ಅವಹೇಳನಕಾರಿ ಸಂದೇಶಕ್ಕೆ ಆಗಲಿ ಶಾಸ್ತಿ


ಚಿಕ್ಕಬಳ್ಳಾಪುರ:
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ನಿಂದಿಸಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರನ್ನು ವಜಾಗೊಳಿಸುವಂತೆ ಜಿಲ್ಲಾ ಜೆಡಿಎಸ್ ಪ್ರತಿಭಟಿಸಿತು.
ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆ ಕೂಗಿದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಅಧಿಕಾರಿಯ ವಿರುದ್ಧದ ಸಂದೇಶಗಳ ಭಿತ್ತಿಪತ್ರ ಪ್ರದರ್ಶಿಸಿದರು.
ಭ್ರಷ್ಟ ಅಧಿಕಾರಿಯು ಕೇಂದ್ರ ಸಚಿವರ ವಿರುದ್ಧ ಅವಹೇಳನಕಾರಿ ರೀತಿಯ ಸಂದೇಶವನ್ನು ಅಧೀನದ ಸಿಬ್ಬಂದಿಗೆ ಪತ್ರದ ಮೂಲಕ ರವಾನಿಸಿರುವುದು ದುರಹಂಕಾರಕ್ಕೆ ನಿದರ್ಶನ. ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳಿವೆ. ಕೂಡಲೇ ಪ್ರಕರಣಗಳ ತನಿಖೆ ನಡೆಸಿ, ಶಿಸ್ತುಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಒತ್ತಾಯಿಸಿದರು.
ತಾಪಂ ಮಾಜಿ ಉಪಾಧ್ಯಕ್ಷ ಕೆ.ಆರ್.ರೆಡ್ಡಿ, ತಾಲೂಕು ಜೆಡಿಎಸ್ ಅಧ್ಯಕ್ಷ ಕೊಳವನಹಳ್ಳಿ ಮುನಿರಾಜು, ನಗರಸಭೆ ಮಾಜಿ ಸದಸ್ಯ ಕಿಸಾನ್ ಕೃಷ್ಣಪ್ಪ, ಮುಖಂಡರಾದ ಜಗದೀಶ್, ಶ್ರೀನಿವಾಸ್, ಪಾರಿಜಾತಮ್ಮ, ಅಕಿಲ್ ರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

ವಾಹನ ಸವಾರರ ಆಕ್ರೋಶ
ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿದ ಸಂದರ್ಭದಲ್ಲಿ ಕೆಲ ತಾಸು ಕಾದ ವಾಹನ ಸವಾರರು ನಿರಂತರವಾಗಿ ಹಾರನ್ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ಇದರ ನಡುವೆ ಆಂಬುಲೆನ್ಸ್ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿಕೊಂಡಿತ್ತು. ಕೊನೆಗೆ ಸಂಚಾರಿ ಠಾಣೆ ಪೊಲೀಸರು ಪ್ರತಿಭಟನಾಕಾರರನ್ನು ಎಬ್ಬಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net