ಮಾಜಿ ಎಂಎಲ್‌ಸಿ ಟಿ.ಎ. ಶರವಣಗೆ ಮಾತೃವಿಯೋಗ; ಕೋವಿಡ್‌-19 ಸೋಂಕಿಗೆ ಬಲಿಯಾದ ಧನಲಕ್ಷ್ಮಮ್ಮ

Sharavan
Published on

ಬೆಂಗಳೂರು: ಕರೊನಾ ಹಾವಳಿ ಮುಂದುವರಿದಿದ್ದು, ಸೋಂಕಿತರ ಸಂಖ್ಯೆಯಷ್ಟೇ ಅಲ್ಲದೆ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ತೀವ್ರಗತಿಯಲ್ಲಿ ಏರುತ್ತಿದೆ. ಕರೊನಾ ಎರಡನೇ ಅಲೆಗೆ ಮಧ್ಯವಯಸ್ಕರೂ ಬಲಿಯಾಗುತ್ತಿದ್ದು, ಹಿರಿಯ ನಾಗರಿಕರು ಕೂಡ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಈಗಾಗಲೇ ಬಹಳಷ್ಟು ರಾಜಕಾರಣಿಗಳಲ್ಲದೆ ಅವರ ಸಂಬಂಧಿಕರೂ ಕೋವಿಡ್‌-19 ಸೋಂಕಿಗೆ ಒಳಗಾಗಿ ಮೃತಪಟ್ಟಿದ್ದಾರೆ. ಇದೀಗ ಜೆಡಿಎಸ್‌ ಮುಖಂಡ, ವಿಧಾನಪರಿಷತ್‌ ಮಾಜಿ ಸದಸ್ಯ ಟಿ.ಎ. ಶರವಣ ಅವರ ತಾಯಿ ಸಹ ಕರೊನಾದಿಂದಾಗಿ ಮೃತಪಟ್ಟಿದ್ದಾರೆ. ಶರವಣ ಅವರ ತಾಯಿ ಧನಲಕ್ಷ್ಮಮ್ಮ ಅವರಲ್ಲಿ ಸೋಂಕು ದೃಢಪಟ್ಟಿದ್ದು, ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ.

ಧನಲಕ್ಷ್ಮಮ್ಮ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಶರವಣ ಅವರ ಕುಟುಂಬಕ್ಕೆ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಸೇರಿ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net