ತುಮಕೂರಿನಲ್ಲಿ ಬಿಜೆಪಿಗಿಂತ ಜೆಡಿಎಸ್‌ನವರು ಹೆಚ್ಚಿನ ಕೆಲಸ ಮಾಡಿದ್ದಾರೆ : ಸಂಸದ ವಿ.ಸೋಮಣ್ಣ

V Somanna
Published on

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಂದೇ ನ್ಯಾಣದ ಎರಡು ಮುಖದ ರೀತಿ ಕೆಲಸ ಮಾಡಿದರು. ರಾಜ್ಯದ 28 ಕ್ಷೇತ್ರದಲ್ಲೂ ಉಭಯ ಪಕ್ಷಗಳ ನಡುವೆ ಸಮನ್ವಯತೆ ಇತ್ತು. ತುಮಕೂರು ಕ್ಷೇತ್ರದಲ್ಲಿ ಬಿಜೆಪಿಗಿಂತಲೂ ಜೆಡಿಎಸ್‌ನವರು ಹೆಚ್ಚಿನ ಕೆಲಸ ಮಾಡಿದರು ಎಂದು ನೂತನ ಸಂಸದ ವಿ. ಸೋಮಣ್ಣ ಹೇಳಿದರು.

ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತುಮಕೂರಿಗೆ ನಾಲ್ಕೈದು ಬಾರಿ ಭೇಟಿ ನೀಡಿ ನನಗೆ ದೊಡ್ಡ ಶಕ್ತಿ ನೀಡಿದರು. ಅವರಿಗೆ ನಾನು ಯಾವತ್ತೂ ಖುಣಿ. ಜೆಡಿಎಸ್ ಮತ್ತು ಬಿಜೆಪಿಯ ಈ ಸಮನ್ವಯತೆ ರಾಜ್ಯದಲ್ಲಿ ಮುಂದಿನ ದಿನಗಳಲ್ಲೂ ಇದೇ ರೀತಿ ಮುಂದುವರೆಯುತ್ತದೆ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿದೆ ಎಂದರು.

ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಹನ್ನೊಂದು ತಿಂಗಳು ಒಂದು ರೀತಿ ವನವಾಸದಲ್ಲಿದ್ದೆ. ಸದಾ ಕೆಲಸ ಮಾಡುವವನಿಗೆ ಕೆಲಸವೇ ಇಲ್ಲದಂತಾಗಿತ್ತು. ಈಗ ಕೆಲಸ ಮಾಡುವ ಅವಕಾಶ ದೊರೆತ್ತಿದೆ. ತುಮಕೂರಿನ ಜನರು ನಾನು ಹೊರಗಿನವನು ಎಂದು ಒಂದು ಕ್ಷಣವೂ ಅಂದುಕೊಳ್ಳದೆ ನನ್ನನ್ನು ಬೆಂಬಲಿಸಿದ್ದಾರೆ. ಎರಡು ಲಕ್ಷ ಲೀಡ್ ಬರುವ ನಿರೀಕ್ಷೆ ಮಾಡಿದ್ದೆ. ನನ್ನ ನಿರೀಕ್ಷೆಗೆ 20 ಸಾವಿರ ಮತಗಳು ಮಾತ್ರ ಕಡಿಮೆಯಾಯಿತು ಅಷ್ಟೇ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net