ರಾಜ್ಯದ ಹಿತಕ್ಕಾಗಿ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆ

GTD
Published on

ಮೈಸೂರು: ರಾಜ್ಯ ಮತ್ತು ದೇಶದ ಹಿತದೃಷ್ಟಿಯಿಂದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆಯಾಗುವುದು ಉತ್ತಮ ತೀರ್ಮಾನವಾಗಿದೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರೂ ಆದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.


ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಸಮಾಲೋಚನೆ ನಡೆಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮೈತ್ರಿಯನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಒಟ್ಟಿಗೆ ಕುಳಿತು ದೇಶದ ಹಿತಾಸಕ್ತಿ, ರಾಜ್ಯದ ಗಮನವನ್ನು ಇಟ್ಟುಕೊಂಡು ಸಮಾಲೋಚನೆ ಮಾಡಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿವಿಧ ವಿಚಾರಗಳ ಕುರಿತು ಸಮಾಲೋಚನೆ ಮಾಡಿ ಒಂದಾಗಿರುವುದರಿಂದ ಅನುಕೂಲ ಆಗಲಿದೆ. ರಾಜ್ಯದಲ್ಲಿ ಈ ಎರಡೂ ಪಕ್ಷಗಳ ಮೈತ್ರಿಯಿಂದ ಮುಂದಿನ ದಿನಗಳಲ್ಲಿ ಎರಡು ಪಕ್ಷಗಳಿಗೆ ದೊಡ್ಡ ಶಕ್ತಿ ಬರಲಿದೆ. ಇದರಿಂದ ಪಕ್ಷಕ್ಕೂ ಅನುಕೂಲ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net