ಅಲ್ಪ ಸಂಖ್ಯಾತರ ಬಗ್ಗೆ ಮಾತನಾಡುವ ನೈತಿಕತೆ ಜೆಡಿಎಸ್‌ಗೆ ಇಲ್ಲ

alpasankyatha
Published on

ಮಡಿಕೇರಿ: ಅಲ್ಪ ಸಂಖ್ಯಾತರ ಬಗ್ಗೆ ಮಾತಾನಾಡುವ ಯಾವುದೇ ನೈತಿಕತೆ ಜೆಡಿಎಸ್ ಪಕ್ಷಕ್ಕೆ ಇರುವುದಿಲ್ಲ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಹೇಳಿದರು.

ನಗರದಲ್ಲಿ‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕಾಗಿ ರೆಸಾರ್ಟ್ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಹೇಳಿರುವುದು ಹಾಸ್ಯಾಸ್ಪದ ವಾಗಿದೆ. ವಕ್ಫ್ ಅಧ್ಯಕ್ಷ ಸ್ಥಾನದ ವಿಷಯದಲ್ಲಿ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳು ಅಧಿಕ ಸಂಖ್ಯೆಯಲ್ಲಿರುವುದರಿಂದ ಅಭಿಪ್ರಾಯ ಸಂಗ್ರಹಣೆಗಾಗಿ ಸಭೆಗಳನ್ನು ಮಾಡಲಾಗಿದೆ. ಅಭಿಪ್ರಾಯ ಸಂಗ್ರಹಿಸಿ 2 ಶಾಸಕರಿಗೆ ಮತ್ತು ಜಿಲ್ಲಾಧ್ಯಕ್ಷ ಮೂಲಕ ಪಕ್ಷದ ವರಿಷ್ಠರಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಜಾತ್ಯತೀತ ಎಂಬ ನಾಮವನ್ನು ಇಟ್ಟು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿರುವ ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಘಟಕ ಎಂಬುವುದು ಇರುವುದೇ ಹಾಸ್ಯಾಸ್ಪದವಾಗಿದೆ. ಜಿಲ್ಲೆಯ ಯುವ ಶಾಸಕರು ಅನುದಾನ ತಂದು 2ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುತ್ತಿದ್ದು, ಇವುಗಳನ್ನು ಸಹಿಸಲಾಗದೆ ವಿರೋಧ ಪಕ್ಷವೇ ಇಲ್ಲದ ರೀತಿಯಲ್ಲಿ ನೆಲಕಚ್ಚಿರುವ ಜೆಡಿಎಸ್ ತನ್ನ ಉಳಿವಿಗೋಸ್ಕರ ಹೇಳಿಕೆ ನೀಡುತ್ತಿದೆ ಎಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಂ.ಸಯ್ಯದ್ ಭಾವ, ಕುಶಾಲನಗರ ಬ್ಲಾಕ್ ಅಧ್ಯಕ್ಷ ಅಬ್ದುಲ್ ರಜಾಕ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ರಫೀಕ್ ಪೋಳುಮಂಡ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಎ.ಎಂ.ಉಮ್ಮರ್, ಮಡಿಕೇರಿ‌ ಬ್ಲಾಕ್ ಅಧ್ಯಕ್ಷ ಪೀಟರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net